Monday, September 21, 2026
spot_img
More
    spot_img
    HomeTop Storyಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆ; ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ

    ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆ; ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ

    ನವದೆಹಲಿ: ಕೆನಡಾದಲ್ಲಿ ಕಳೆದ ವಾರ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆಯಾಗಿದೆ. ಭಾರತೀಯ ಹೈಕಮಿಷನರ್‌ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ವಿಚಾರವನ್ನು ಕೆನಡಾದ ಆಡಳಿತಕ್ಕೆ ತಂದಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಮಾಹಿತಿ ನೀಡಿದೆ.

    Advertisement

    ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ, ಭದ್ರತೆ ಹಾಗೂ ಹಿತ ಕಾಪಾಡುವುದು ನಮಗೆ ಅತ್ಯಂತ ಪ್ರಮುಖವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್‌ ಜೈಸ್ವಾಲ್‌ ಹೇಳಿದ್ದಾರೆ.

    ಕಳೆದ ವಾರ ದುರಾದೃಷ್ಟಕರ ಘಟನೆಗಳಾಗಿವೆ. ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆಯಾಗಿದೆ. ಕೆನಡಾದಲ್ಲಿರುವ ನಮ್ಮ ಭಾರತೀಯರನ್ನು ಆಘಾತ ಮೂಡಿಸಿರುವ ಈ ಭಯಾನಕ ಘಟನೆಗಳಿಂದ ದುಃಖಿತರಾಗಿದ್ದೇವೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇವೆ. ಈ ವಿಚಾರದಲ್ಲಿ ನಮ್ಮ ಹೈಕಮಿಷನ್‌ ಹಾಗೂ ಟೊರೊಂಟೊದಲ್ಲಿ ರಾಯಭಾರಿ ಕಚೇರಿ ಸಾಧ್ಯವಾದಷ್ಟು ಎಲ್ಲಾ ರೀತಿಯ ನೆರವು ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ಭಾರತೀಯ ವಿದ್ಯಾರ್ಥಿಗಳ ಕೊಲೆ ಘಟನೆ ಕುರಿತ ತನಿಖೆಗೆ ಭಾರತೀಯ ಹೈಕಮಿಷನ್‌ ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದೆ. ಅಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳು ತೆಗದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆ ನೀಡಿದ್ದೇವೆ ಎಂದು ಜೈಸ್ವಾಲ್‌ ಹೇಳಿದ್ದಾರೆ.

    ಇನ್ನು ಅಧಿಕೃತ ಮಾಹಿತಿಯ ಪ್ರಕಾರ ಕೆನಡಾದಲ್ಲಿ ಸುಮಾರು 40,000 ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading