Sunday, November 8, 2026
spot_img
More
    spot_img
    HomeLatest newsಒಂದು ದೇಶ, ಒಂದು ಚುನಾವಣೆ ಮಸೂದೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

    ಒಂದು ದೇಶ, ಒಂದು ಚುನಾವಣೆ ಮಸೂದೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆಯ ಪ್ರಯತ್ನ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯವಿರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ. ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ ಎಂದು ಆರೋಪಿಸಿದ್ದಾರೆ.

    ಕೇರಳ ಸರ್ಕಾರ ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾಪವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅಗತ್ಯ ಬಿದ್ದರೆ ನಮ್ಮ ಸರ್ಕಾರ ಸಹ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

    ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾಪದಲ್ಲಿ ಪರಿಹಾರವೇ ಇಲ್ಲ ಎಂದರು. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣೆ ಆಯೋಗಕ್ಕೆ ಇಲ್ಲ. ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ‍್ಳಲು ಆಗಾಗ ಇಂತಹ ಗಿಮಿಕ್‌ಗಳನ್ನು ಪ್ರದರ್ಶಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search