Saturday, November 7, 2026
spot_img
More
    spot_img
    HomeCrimeಅಳಂದ ವೋಟ್‌ ಚೋರಿಯಲ್ಲಿ ಬಿಜೆಪಿ ನಾಯಕ, ಮಾಜಿ ಶಾಸಕ: SIT ಚಾರ್ಜ್ ಶೀಟ್

    ಅಳಂದ ವೋಟ್‌ ಚೋರಿಯಲ್ಲಿ ಬಿಜೆಪಿ ನಾಯಕ, ಮಾಜಿ ಶಾಸಕ: SIT ಚಾರ್ಜ್ ಶೀಟ್

    ಅಳಂದ ವಿಧಾನಸಭೆ ಕ್ಷೇತ್ರದ ಮತಗಳ್ಳತನ ಪ್ರಕರಣ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯನ್ನು ಮಾಡಿದ್ದರು. ಕರ್ನಾಟಕ ಸರ್ಕಾರ ಈ ಕುರಿತ ತನಿಖೆಯನ್ನು ಎಸ್‌ಐಟಿಗೆ ವಹಿಸಿತ್ತು.

    ಕಲಬುರಿಗ ಜಿಲ್ಲೆ ಅಳಂದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ 5,994 ಜನರ ಹೆಸರು ಡಿಲೀಟ್ ಪ್ರಕರಣದ ಕುರಿತು ಸಿಐಡಿ ಎಡಿಜಿಪಿ ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಮಾಡಿ ಕೋರ್ಟ್‌ಗೆ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಿದೆ.

    ಈ ವೋಟ್ ಚೋರಿ ಪ್ರಕರಣದ ಕುರಿತು 7 ಜನರ ವಿರುದ್ಧ 22,000 ಪುಟದ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪಿಗಳಲ್ಲಿ ಬಿಜೆಪಿ ನಾಯಕ, ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸಹ ಆರೋಪಿಗಳು.

    THE ALAND FILES ಹೆಸರಿನಲ್ಲಿ ಪತ್ರಿಕಾಗೋಷ್ಠಿ ಮಾಡಿದ್ದ ರಾಹುಲ್ ಗಾಂಧಿ ಹಲವು ಆರೋಪ ಮಾಡಿದ್ದರು. ರಾಜ್ಯ ಚುನಾವಣಾ ಆಯೋಗದ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದ್ದರು. ಈಗ ಎಸ್‌ಐಟಿ ಚಾರ್ಜ್ ಶೀಟ್‌ ಮೂಲಕ ಹಗರಣ ಬಯಲಾಗಿದೆ.

    ಪ್ರತಿ ಹೆಸರು ಡಿಲೀಟ್ ಮಾಡಲು 80 ರೂ. ಹಣ: ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ವೋಟ್ ಚೋರಿ ನಡೆದಿದೆ ಎಂದು ಆರೋಪಿಸಿದ್ದರು. 2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಸಹ ಇದನ್ನು ಪ್ರಸ್ತಾಪಿಸಿದ್ದರು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ಪತ್ರಿಕಾಗೋಷ್ಠಿ ಮಾಡಿದ್ದರು. ಮೊದಲು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಬಳಿಕ ಎಸ್ಐಟಿಗೆ ವರ್ಗಾವಣೆಗೊಂಡಿತ್ತು.

    2022ರ ಡಿಸೆಂಬರ್‌ನಿಂದ 2023ರ ಫೆಬ್ರವರಿ ತನಕ ಮತದಾರರ ಪಟ್ಟಿಯಿಂದ 6,018 ಹೆಸರು ಡಿಲೀಟ್ ಮಾಡಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಒಟ್ಟು 5,994 ಹೆಸರು ಡಿಲೀಟ್ ಮಾಡಲಾಗಿದ್ದು, ಇದಕ್ಕೆ ಸೈಬರ್ ಸೆಂಟರ್ ಬಳಕೆ ಮಾಡಿಕೊಳ್ಳಲಾಗಿದೆ. ಪ್ರತಿ ಹೆಸರು ಡಿಲೀಟ್ ಮಾಡಲು 80 ರೂ. ಪಡೆಯಲಾಗಿದೆ.

    ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಎಸ್‌ಐಟಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಅಳಂದ ಕ್ಷೇತ್ರದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ  ಹರ್ಷಾನಂದ ಗುತ್ತೇದಾರ್, ಆಪ್ತ ಸಹಾಯಕ ತಿಪ್ಪೇರುದ್ರಾ, ಕಲಬುರಗಿ ಸೈಬರ್ ಸೆಂಟರ್‌ನ ಅಕ್ರಂ ಪಾಷ, ಮುಕಾರಾಂ ಪಾಷಾ, ಮೊಹಮ್ಮದ್ ಅಸೀಫ್ ಮತ್ತು ಪಶ್ಚಿಮ ಬಂಗಾಳ ಮೂಲದ ಬಾಪಿ ಆದ್ಯಾ ಆರೋಪಿಗಳು.

    ಎಸ್‌ಐಟಿ ಬಾಪಿ ಆದ್ಯಾನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದು, ಚುನಾವಣಾ ಆಯೋಗದಿಂದ ಮತದಾರರ ನೋಂದಾಯಿತ ಮೊಬೈಲ್ ನಂಬರ್‌ಗೆ ಬರುವ ಒಪಿಪಿ ಸೈಬರ್ ಸೆಂಟರ್‌ನಲ್ಲಿ ಸಿಗುವಂತೆ ಮಾಡಲು ಈತ ಸಹಕಾರ ಮಾಡಿದ್ದ ಎಂಬುದು ಆರೋಪವಾಗಿದೆ.

    ತನಿಖೆಯ ಭಾಗವಾಗಿ ಕೆಲವು ದಿನಗಳ ಹಿಂದೆ ಎಸ್ಐಟಿ ಸುಭಾಷ್ ಗುತ್ತೇದಾರ್, ಹರ್ಷಾನಂದ ಗುತ್ತೇದಾರ್ ನಿವಾಸದ ಮೇಲೆ ದಾಳಿ ಮಾಡಿತ್ತು. ಆಗ ಸುಟ್ಟು ಹಾಕಲಾಗಿದ್ದ ಮತದಾರರ ಪಟ್ಟಿಯ ಚೂರುಗಳು ಪತ್ತೆಯಾಗಿದ್ದವು.

    ಮಾಜಿ ಶಾಸಕರು ಹೆಸರುಗಳನ್ನು ಡಿಲೀಟ್ ಮಾಡಿರುವುದಕ್ಕೆ ಹಣ ಸಂದಾಯ ಮಾಡಿದ್ದಾರೆ. ಅದಕ್ಕೆ ಡಿಜಿಟಲ್ ಸಾಕ್ಷ್ಯಗಳು ಸಿಕ್ಕಿವೆ. ಈಗಾಗಲೇ ಈ ಪ್ರಕರಣದಲ್ಲಿ ಬಂಧನ ಭೀತಿಯಿಂದ ಸುಭಾಷ್ ಗುತ್ತೇದಾರ್ ಜಾಮೀನು ಪಡೆದುಕೊಂಡಿದ್ದಾರೆ.

    2023ರಲ್ಲಿ ಅಳಂದ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಪಾಟೀಲ್ 89,508 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಸುಭಾಷ್ ಗುತ್ತೇದಾರ್ 79,160 ಮತಗಳನ್ನು ಪಡೆದು ಸೋಲು ಕಂಡಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search