Sunday, November 8, 2026
spot_img
More
    spot_img
    HomeStateDistrictಕೊಪ್ಪಳ, ಧಾರವಾಡದಲ್ಲಿ ಕೆಲಸ ಖಾಲಿ ಇದೆ: ವೇತನ ವಿವರ

    ಕೊಪ್ಪಳ, ಧಾರವಾಡದಲ್ಲಿ ಕೆಲಸ ಖಾಲಿ ಇದೆ: ವೇತನ ವಿವರ

    ಕೊಪ್ಪಳ ಮತ್ತು ಧಾರವಾಡ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿ ಒಂದಿದೆ. ಮಿಷನ್ ಶಕ್ತಿ ಯೋಜನೆಯಡಿ ತಾತ್ಕಾಲಿಕ ಹುದ್ದೆ ಭರ್ತಿಗಾಗಿ ಕೊಪ್ಫಳದಲ್ಲಿ ಮತ್ತು ಸ್ಟೈಫಂಡ್ ಸಹಿತಿ ತರಬೇತಿಗಾಗಿ ಧಾರವಾಡದಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿ ವಿವಿಧ ಕಾರಣಗಳಿಂದ ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.

    ಷರತ್ತು ಹಾಗೂ ನಿಬಂಧನೆಗೊಳಪಟ್ಟು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾರ್ಯಕ್ರಮ ಸಹಾಯಕರ (ಡಿಇಒ)  1 ಹುದ್ದೆ, ಜಿಲ್ಲಾ ಬಾಲಭವನ ಜಿಲ್ಲಾ ಕಾರ್ಯಕ್ರಮ ಸಂಯೋಜಕರು 1 ಹುದ್ದೆ ಹಾಗೂ ಕಚೇರಿ ಸಹಾಯಕರ 1 ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತದೆ.

    ಡಿಇಒ ಮತ್ತು ಸಹಾಯಕ ಕಾರ್ಯಕ್ರಮ ಅಧಿಕಾರಿ (ಪಿಎಂಎಂವಿವೈ) ಹುದ್ದೆಗೆ ಪದವಿ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಜ್ಞಾನ, ಡಾಟಾ ಮ್ಯಾನೇಜ್‌ಮೆಂಟ್, ಸರ್ಕಾರಿ ಅಥವಾ ಸರ್ಕಾರೇತರ, ಐಟಿ ಆಧಾರಿತ ಸಂಸ್ಥೆಗಳೊಂದಿಗೆ ರಾಜ್ಯ ಅಥವಾ ಜಿಲ್ಲಾ ಮಟ್ಟದಲ್ಲಿ ಡೇಟಾ ನಿರ್ವಹಣಾ ಪ್ರಕ್ರಿಯೆ ದಾಖಲೀಕರಣ ಮತ್ತು ವೆಬ್ ಆಧಾರಿತ ವರದಿ ತಯಾರಿಕೆಯಲ್ಲಿ ಕನಿಷ್ಟ 3 ವರ್ಷಗಳ ಸೇವಾನುಭವ ಹೊಂದಿರುವವರು ಅರ್ಜಿ ಸಲ್ಲಿಸಬೇಕು.

    ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಯಾವುದಾದರೂ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಬಗ್ಗೆ ಅರ್ಜಿಯೊಂದಿಗೆ ಮಾಹಿತಿ ಒದಗಿಸುವುದು ಅವಶ್ಯ.

    ಕಚೇರಿ ಸಹಾಯಕರ ಹುದ್ದೆಗೆ ಪಿಯುಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಅಂದು ಸಂಜೆ 5.30 ಗಂಟೆಯೊಳಗೆ ಅರ್ಜಿಗಳನ್ನು ಕಚೇರಿಗೆ ಸಲ್ಲಿಸಬೇಕು.

    ಮೂರು ಹುದ್ದೆಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು.

    ಸ್ಟೈಫಂಡ್ ಆಧಾರಿತ ತರಬೇತಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿಗೆ ಧಾರವಾಡ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಅಪ್ರೆಂಟಿಸ್ ತರಬೇತಿಗಾಗಿ ಪರಿಶಿಷ್ಟ ಜಾತಿಯ ಓರ್ವ ಮತ್ತು ಪರಿಶಿಷ್ಟ ಪಂಗಡದ ಓರ್ವ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಚೇರಿಯಲ್ಲಿ 12 ತಿಂಗಳ ಅವಧಿಯ ತರಬೇತಿ ನೀಡಲಾಗುತ್ತದೆ.

    ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರಬೇಕು.

    ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಒಳಗಿರಬೇಕು.

    ತರಬೇತಿಯ ಅವಧಿ ವೇಳೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಯಾವುದೇ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

    ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ ಎದುರಿಗೆ, ಧಾರವಾಡ ಇಲ್ಲಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 23 ರೊಳಗೆ ಕಚೇರಿಗೆ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರನ್ನು ಅಥವಾ ಸಹಾಯಕ ನಿರ್ದೇಶಕರು (ಪ್ರ) 9538076619 ಸಂಪರ್ಕಿಸಿ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search