Friday, August 7, 2026
spot_img
More
    spot_img
    HomeLatest newsಲಕ್ಷ್ಮಿ ಹೆಬ್ಬಾಳ್ಕರ್‌ ಕಾರು ಅಪಘಾತ: ಗುಣಮುಖರಾಗಲಿ ಎಂದು ದೇವರಲ್ಲಿ ಸಿ.ಟಿ ರವಿ ಪ್ರಾರ್ಥನೆ

    ಲಕ್ಷ್ಮಿ ಹೆಬ್ಬಾಳ್ಕರ್‌ ಕಾರು ಅಪಘಾತ: ಗುಣಮುಖರಾಗಲಿ ಎಂದು ದೇವರಲ್ಲಿ ಸಿ.ಟಿ ರವಿ ಪ್ರಾರ್ಥನೆ

    ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್‍ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.

    Advertisement

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

    ಈಚೆಗೆ ನಡೆದ ವಿಧಾನಮಂಡಲ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್‍ಸಿ ಸಿ.ಟಿ.ರವಿ ನಡುವೆ ರಾಜಕೀಯ ಘರ್ಷಣೆಯಾಗಿತ್ತು. ಸದನದಲ್ಲೇ ಸಚಿವೆಯನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ ಆರೋಪ ಸಿ.ಟಿ.ರವಿ ಅವರ ಮೇಲಿತ್ತು. ಇದು ಎರಡೂ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು. ತನ್ನ ಮೇಲೆ ಅವಾಚ್ಯ ಪದ ಬಳಕೆ ಮಾಡಲಾಗಿದೆ ಎಂದು ಸಚಿವೆ ಕಣ್ಣೀರಿಟ್ಟಿದ್ದರು.

    ಘಟನೆ ನಡೆದ ದಿನ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದರು. ಆ ದಿನ ರಾತ್ರಿ ಹಲವು ನಾಟಕೀಯ ಬೆಳವಣಿಗೆ ನಡೆದವು. ಮಾರನೇ ದಿನ ಕೋರ್ಟ್‍ನಲ್ಲಿ ಬಿಜೆಪಿ ನಾಯಕನಿಗೆ ಜಾಮೀನು ಸಿಕ್ಕಿತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಸಂದರ್ಶನವೊಂದರಲ್ಲಿ ಸಿ.ಟಿ.ರವಿ, ಅಕ್ಕ ನಾನು ಹೃದಯದಿಂದ ಕೆಟ್ಟವನಲ್ಲ ಎಂದು ತಿಳಿಸಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading