ಲಕ್ನೋ: ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 30ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆರಿಸಿಕೊಂಡಿದ್ದು, ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಈ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್‌ಗೆ ಅತಿ ಮುಖ್ಯವಾಗಿದ್ದು, ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿದೆ. ಟೂರ್ನಿಯಲ್ಲಿ ನಡೆದ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಬಳಿಕ ನಡೆದ ಯಾವುದೇ ಪಂದ್ಯದಲ್ಲಿಯೂ ಸಹ ಗೆಲುವನ್ನು ಕಂಡಿಲ್ಲ.
ಎಂಎಸ್ ಧೋನಿ ನಾಯಕತ್ವ ವಹಿಸಿಕೊಂಡರೂ ಸಹ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೋಲನ್ನು ಕಂಡಿದೆ. ಹೀಗೆ ಸತತ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ಇಂದಿನ ಪಂದ್ಯದಲ್ಲಿ ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ.
ರವಿಚಂದ್ರನ್ ಅಶ್ವಿನ್‌ರನ್ನು ತಂಡದಿಂದ ಹೊರಗಿಡಲಾಗಿದ್ದು, ಬದಲಾಗಿ ಓವರ್ಟನ್ ತಂಡ ಸೇರಿದ್ದಾರೆ ಹಾಗೂ ಡಿವಾನ್ ಕಾನ್ವೆ ಬದಲಾಗಿ ಶೈಕ್ ರಶೀದ್ ಕಣಕ್ಕಿಳಿಯುತ್ತಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಶೇಕ್ ರಶೀದ್, ರಚಿನ್ ರವೀಂದ್ರ, ರಾಹುಲ್ ತ್ರಿಪಾಠಿ, ವಿಜಯ್ ಶಂಕರ್, ರವೀಂದ್ರ ಜಡೇಜಾ, ಜೇಮಿ ಓವರ್ಟನ್, ಎಂಎಸ್ ಧೋನಿ(ವಿಕೆಟ್ ಕೀಪರ್ ಹಾಗೂ ನಾಯಕ), ಅನ್ಶುಲ್ ಕಾಂಬೋಜ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಮತೀಶ ಪತಿರಾನ
ಲಕ್ನೋ ಸೂಪರ್ ಜೈಂಟ್ಸ್ ಇನ್ನಿಂಗ್ಸ್: ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ರಿಷಬ್ ಪಂತ್(ನಾಯಕ ಹಾಗೂ ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಶಾರ್ದೂಲ್ ಠಾಕೂರ್, ಅವೇಶ್ ಖಾನ್, ಆಕಾಶ್ ದೀಪ್, ದಿಗ್ವೇಶ್ ಸಿಂಗ್ ರಾಠಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


