Monday, November 2, 2026
spot_img
More
    spot_img
    HomeSportsCricketIPL 2025: ಕೊನೆಗೂ ಆ ಫ್ರಾಡ್ ಆಟಗಾರನನ್ನು ತಂಡದಿಂದ ಹೊರಹಾಕಿದ್ರಲ್ಲ ಎಂದು ಕುಣಿದ ಚೆನ್ನೈ ಫ್ಯಾನ್ಸ್!

    IPL 2025: ಕೊನೆಗೂ ಆ ಫ್ರಾಡ್ ಆಟಗಾರನನ್ನು ತಂಡದಿಂದ ಹೊರಹಾಕಿದ್ರಲ್ಲ ಎಂದು ಕುಣಿದ ಚೆನ್ನೈ ಫ್ಯಾನ್ಸ್!

    ಲಕ್ನೋ: ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 30ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿನ ತನ್ನ ಏಳನೇ ಪಂದ್ಯವನ್ನಾಡುತ್ತಿದ್ದು, ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ಕಣಕ್ಕಿಳಿದಿದೆ.

    ಮುಂಬೈ ಇಂಡಿಯನ್ಸ್ ವಿರುದ್ಧ ಟೂರ್ನಿಯಲ್ಲಿ ತಾನಾಡಿದ ಚೊಚ್ಚಲ ಪಂದ್ಯದಲ್ಲಿ ಗೆದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಬಳಿಕ ನಡೆದ ಐದು ಪಂದ್ಯಗಳಲ್ಲಿ ಸಾಲು ಸಾಲು ಸೋಲನ್ನು ಕಂಡಿದೆ.

    ಹೀಗೆ ಆರಂಭದಲ್ಲೇ ಹೀನಾಯ ಸ್ಥಿತಿಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ.

    ಹೀಗಾಗಿ ಸಾಲು ಸಾಲು ಸೋತ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಇಂದು ಎರಡು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ರವಿಚಂದ್ರನ್ ಅಶ್ವಿನ್‌ರನ್ನು ತಂಡದಿಂದ ಹೊರಗಿಡಲಾಗಿದ್ದು, ಬದಲಾಗಿ ಓವರ್ಟನ್ ತಂಡ ಸೇರಿದ್ದಾರೆ ಹಾಗೂ ಡಿವಾನ್ ಕಾನ್ವೆ ಬದಲಾಗಿ ಶೈಕ್ ರಶೀದ್ ತಂಡ ಸೇರಿದ್ದಾರೆ.

    ಹೀಗೆ ಈ ಎರಡು ಬದಲಾವಣೆಗಳನ್ನು ಎಂಎಸ್ ಧೋನಿ ಟಾಸ್ ಬಳಿಕ ಘೋಷಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ರವಿಚಂದ್ರನ್ ಅಶ್ವಿನ್ ಕೈಬಿಟ್ಟದ್ದಕ್ಕೆ ಹೆಚ್ಚು ಪ್ರಶಂಸೆ ವ್ಯಕ್ತವಾಗುತ್ತಿದೆ.

    ಅಶ್ವಿನ್ ಕೈಬಿಟ್ಟದ್ದು ಒಳ್ಳೆಯ ನಿರ್ಧಾರ ಎಂದು ಅನೇಕರು ಟ್ವೀಟ್ ಮಾಡಿದ್ದು, ಇಷ್ಟು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ಆಲ್‌ರೌಂಡರ್ ವಿರುದ್ಧ ಕಿಡಿಕಾರಿದ್ದಾರೆ. ನೆಟ್ಟಿಗನೋರ್ವ ಕೊನೆಗೂ ಫ್ರಾಡ್ ಅಶ್ವಿನ್‌ರನ್ನು ತಂಡದಿಂದ ಹೊರಹಾಕಿದ್ದು ಉತ್ತಮ ನಿರ್ಧಾರ ಎಂದು ಬರೆದುಕೊಂಡಿದ್ದಾರೆ.

    ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಪರ ಹಲವಾರು ಪಂದ್ಯಗಳನ್ನಾಡಿ ಗೆಲುವಿಗೆ ಕಾಣಿಕೆ ನೀಡಿರುವ ಅಶ್ವಿನ್ ವಿರುದ್ಧ ಇಷ್ಟು ದೊಡ್ಡ ಮಟ್ಟದಲ್ಲಿ ಟೀಕೆಗೊಳಗಾಗಲು ಕಾರಣ ಈ ಬಾರಿಯ ಟೂರ್ನಿಯಲ್ಲಿ ಅವರು ನೀಡಿದ ನೀರಸ ಪ್ರದರ್ಶನ ಹಾಗೂ ಅವರ ಯುಟ್ಯೂಬ್ ಚಾನೆಲ್‌ನಲ್ಲಿ ಚೆನ್ನೈ ಟೀಕಿಸಿ ಪ್ರಸಾರವಾದ ಕೆಲ ಮ್ಯಾಚ್ ರಿವ್ಯೂ ವಿಡಿಯೊಗಳು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search