ಲಕ್ನೋ: ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ 30ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆರಿಸಿಕೊಂಡು ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ರನ್ ಗಳಿಸಲು ತಿಣುಕಾಡಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಕಲೆಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 167 ರನ್‌ಗಳ ಗುರಿಯನ್ನು ನೀಡಿದೆ.
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಏಡನ್ ಮಾರ್ಕ್ರಮ್ 6, ಮಿಚೆಲ್ ಮಾರ್ಷ್ 30, ನಿಕೋಲಸ್ ಪೂರನ್ 8, ಆಯುಷ್ ಬದೋನಿ 22, ರಿಷಬ್ ಪಂತ್ 49 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 63, ಆಯುಷ್ ಬದೋನಿ 22, ಅಬ್ದುಲ್ ಸಮದ್ 20, ಶಾರ್ದೂಲ್ ಠಾಕೂರ್ 6 ರನ್ ಹಾಗೂ ಯಾವುದೇ ಎಸೆತ ಎದುರಿಸದ ಡೇವಿಡ್ ಮಿಲ್ಲರ್ ಅಜೇಯರಾಗಿ ಉಳಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ರವೀಂದ್ರ ಜಡೇಜಾ ಹಾಗೂ ಮತೀಶ ಪತಿರಾಣಾ ತಲಾ ಎರಡು ವಿಕೆಟ್, ಅನ್ಶುಲ್ ಕಂಬೋಜ್ ಹಾಗೂ ಖಲೀಲ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


