ಹುಬ್ಬಳ್ಳಿ: ನಿನ್ನೆ ( ಏಪ್ರಿಲ್ 14) ಬೆಳಗ್ಗೆ ಹುಬ್ಬಳ್ಳಿಯಲ್ಲಿ ನಡೆದ ಐದು ವರ್ಷದ ಬಾಲಕಿಯ ಹತ್ಯೆ ಪ್ರಕರಣದ ಆರೋಪಿಯನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ನಡೆಸಿದ್ದು, ಪ್ರಾಣ ರಕ್ಷಣೆಗಾಗಿ ಆರಕ್ಷಕರು ಆತನ ಮೇಲೆ ಗುಂಡು ಹಾರಿಸಿದ್ದಾರೆ.
ಪರಿಣಾಮ ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಗುಂಡೇಟಿಗೆ ಬಲಿಯಾಗಿದ್ದಾನೆ. ಪಿಎಸ್‌ಐ ಅನ್ನಪೂರ್ಣ ಗುಂಡು ಹಾರಿಸಿದ್ದು, ಸದ್ಯ ಇವರು ಲೇಡಿ ಸಿಂಗಂ, ಸಿಂಹಿಣಿ ಎಂದೇ ಪ್ರಸಿದ್ಧರಾಗುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಆರೋಪಿಗೆ ತಕ್ಕ ಶಿಕ್ಷೆ ಎಂದರೆ ಇದೇ ಎಂದು ಪ್ರಶಂಸೆ ವ್ಯಕ್ತವಾಗುತ್ತಿದೆ. ಅನ್ನಪೂರ್ಣ ಅವರ ಫೋಟೊವನ್ನು ಹಂಚಿಕೊಳ್ಳುತ್ತಿರುವ ನೆಟ್ಟಿಗರು ಟ್ರೆಂಡ್ ಮಾಡುತ್ತಿದ್ದಾರೆ.
ಸದ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹ ಪಿಎಸ್‌ಐ ಅನ್ನಪೂರ್ಣ ಅವರಿಗೆ ಸಲ್ಯೂಟ್ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಲು ಹೋದ ವೇಳೆ ಆತ ದಾಳಿ ನಡೆಸಿದ ಕಾರಣ ಮೂವರು ಪೊಲೀಸರು ಗಾಯಗೊಂಡಿದ್ದು, ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಗ್ಗೆ ಸಂತೋಷ್ ಲಾಡ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಮೂವರೂ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ಅನ್ನಪೂರ್ಣ ಅವರನ್ನು ಕಂಡ ಕೂಡಲೇ ಸಂತೋಷ್ ಲಾಡ್ ಸಲ್ಯೂಟ್ ಮಾಡಿ ಕೈಕುಲುಕಿ ಮೆಚ್ಚುಗೆ ವ್ಯಕ್ರಪಡಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


