Friday, March 20, 2026
spot_img
More
    spot_img
    HomeEntertainmentBREAKING: ಅಭಿನಯ ಸರಸ್ವತಿ, ಹಿರಿಯ ನಟಿ ಬಿ. ಸರೋಜಾ ದೇವಿ ನಿಧನ

    BREAKING: ಅಭಿನಯ ಸರಸ್ವತಿ, ಹಿರಿಯ ನಟಿ ಬಿ. ಸರೋಜಾ ದೇವಿ ನಿಧನ

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಲ್ಲೇಶ್ವರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

    ಬಿ ಸರೋಜಾ ದೇವಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ತಮ್ಮ 17ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಸರೋಜಾ ದೇವಿ ಅವರು ಕನ್ನಡ ಮಾತ್ರವಲ್ಲದೇ ತಮಿಳು, ಮಲಯಾಳಂ, ತೆಲುಗು ಹಾಗೂ ಹಿಂದಿ ಭಾಷೆಯಲ್ಲೂ ನಟಿಸಿದ್ದು, 200 ಕ್ಕೂ ಹೆಚ್ಚು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

    1955ರಲ್ಲಿ ತೆರೆಗೆ ಬಂದ ಮಹಾಕವಿ ಕಾಳಿದಾಸ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸರೋಜಾ ದೇವಿ ಅವರು ಡಾ. ರಾಜ್‌ಕುಮಾರ್‌, ಕಲ್ಯಾಣ್‌ ಕುಮಾರ್‌ ಸೇರಿ ಹಲವಾರು ಸ್ಟಾರ್‌ ನಟರ ಚಿತ್ರಗಳಲ್ಲಿ ನಟಿಸಿದ್ದಾರೆ.

    ತಮ್ಮ ಮೇಕಪ್‌ ಹಾಗೂ ಬಟ್ಟಲು ಕಂಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸರೋಜಾ ದೇವಿ ತಮ್ಮ ನಟನೆಗಾಗಿ ಅಭಿನಯ ಸರಸ್ವತಿ ಎಂಬ ಬೃಹತ್‌ ಬಿರುದನ್ನು ಗಳಿಸಿದ್ದರು.

    ಮಹದೇಶ್ವರಬೆಟ್ಟ: 5 ಹುಲಿಗಳ ಸಾವಿಗೆ ನಿಖರ ಕಾರಣ ಬಿಚ್ಚಿಟ್ಟ ಪ್ರಯೋಗಾಲಯದ ವರದಿ

    ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading