ಬೆಂಗಳೂರು: ಇಂದು ( ಜುಲೈ 14 ) ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಸೇತುವೆಯನ್ನು ಉದ್ಘಾಟನೆ ಮಾಡುತ್ತಿದ್ದಾರೆ.
ಒಂದೆಡೆ ಉದ್ಘಾಟನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದರೆ ಮತ್ತೊಂದೆಡೆ ಕೇಂದ್ರ ಸರ್ಕಾರದ ಈ ಯೋಜನೆಯಡಿಯಲ್ಲಿ ಸಿದ್ಧವಾದ ಈ ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರು ಆಹ್ವಾನವನ್ನು ನೀಡಿದ್ದರು.
ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಾತ್ರ ಈ ಕಾರ್ಯಕ್ರಮವನ್ನು ಮುಂದೂಡುವಂತೆ ತಿಳಿಸಿದ್ದು, ತಮಗೆ ಯಾವುದೇ ಆಹ್ವಾನ ನೀಡದೇ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಬೆಳಗ್ಗೆಯೇ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಕಾರ್ಯಕ್ರಮವನ್ನು ನಿಲ್ಲಿಸುವಂತೆ ನಿತಿನ್ ಗಡ್ಕರಿಗೆ ಪತ್ರ ಬರೆದಿರುವುದಾಗಿ ಟ್ವೀಟ್‌ನಲ್ಲಿ ತಿಳಿಸಿದ್ದರು. ಮಾಧ್ಯಮದವರ ಜತೆ ಮತ್ತೆ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ ನನ್ನನ್ನು ಕರೆಯದೇ ಕಾರ್ಯಕ್ರಮ ಮಾಡುತ್ತಿದ್ದಾರೆ, ನಾನು ಹೋಗುತ್ತಿಲ್ಲ ಹಾಗೂ ಪ್ರತಿಭಟನಾರ್ಥವಾಗಿ ಪಕ್ಷದ ಯಾವೊಬ್ಬ ಸದಸ್ಯನೂ ಸಹ ಹೋಗುತ್ತಿಲ್ಲ ಎಂದು ಕಿಡಿಕಾರಿದರು.
ಅಲ್ಲದೇ ತಮ್ಮ ಕಾರ್ಯಕ್ರಮಗಳಿದ್ದಾಗ ಸಂಬಂಧಪಟ್ಟ ಬಿಜೆಪಿ ನಾಯಕರನ್ನು ತಪ್ಪದೇ ಕರೆಯುತ್ತೇವೆ, ಆದರೆ ಇವರು ಹಾಗೆ ಮಾಡಿಲ್ಲ ಎಂದು ದೂರಿದರು. ತಾನು ಇಂದು ಪೂರ್ವ ನಿಯೋಜಿತ ಕಾರ್ಯಕ್ರಮಗಳ ಸಲುವಾಗಿ ಇಂಡಿ ಕ್ಷೇತ್ರಕ್ಕೆ ತೆರಳುತ್ತಿದ್ದೇನೆ ಎಂದು ಕಾರಣವನ್ನೂ ಸಹ ಸಿದ್ದರಾಮಯ್ಯ ತಿಳಿಸಿದರು.
ಕಂಟಕ್ಟರ್ ಆಗಿ ಬಸ್ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


