ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಯಿತು.
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನು ತಲುಪಿದೆ. ಬಸ್‌ನಲ್ಲಿ ಕಂಡಕ್ಟರ್ ಆಗಿ ಟಿಕೆಟ್ ಹರಿದ ಸಿದ್ದರಾಮಯ್ಯ ಅವರು 500ನೇ ಕೋಟಿಯ ಟಿಕೆಟ್ ನೀಡಿದ್ದಾರೆ. ಟಿಕೆಟ್ ವಿತರಿಸುವ ಮೂಲಕ ಶಕ್ತಿ ಯೋಜನೆಯ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು.
ಕುಮಾರಪಾರ್ಕ್ ಈಸ್ಟ್ ಬಳಿಯ ವಿಂಡ್ಸರ್ ವೃತ್ತದ ಬಳಿ ಕಾರ್ಯಕ್ರಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ.20ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್.11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ವಿವರಿಸಿದರು.
ಗೂಗಲ್ ಮ್ಯಾಪ್‌ನ ಬಣ್ಣ ಬಣ್ಣದ ಲೈನ್‌ಗಳ ಹಿಂದಿರುವ ಅರ್ಥ ನಿಮಗೆ ಗೊತ್ತಾ? ತಪ್ಪದೆ ಓದಿ
ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


