ಇತ್ತೀಚೆಗೆ ನಟಿ ರಮ್ಯಾ ರೇಣುಕಾಸ್ವಾಮಿ ಅವರಿಗೆ ನ್ಯಾಯ ಸಿಗಬೇಕೆನ್ನುವ ಹಾಗೆ ಪೋಸ್ಟ್ ಹಾಕಿದ್ದರು. ಇದಕ್ಕೆ ದರ್ಶನ್ ಅಭಿಮಾನಿಗಳು ರಮ್ಯಾ ಅವರಿಗೆ ಅಶ್ಲೀಲ ಸಂದೇಶ, ಕಮೆಂಟ್ ಮಾಡಿದ್ದರು. ಈ ಸಂಬಂಧ ರಮ್ಯಾ ಅವರುಯ ಸೈಬರ್ ಠಾಣೆಗೆ ದೂರು ದಾಖಲಿಸಿದ್ದರು.ಪ್ರಕರಣ ಸಂಬಂಧ ಈಗಾಗಲೇ ಐವರನ್ನು ಬಂಧಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ, ಮತ್ತು ಇತರ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ತೀರ್ಪಿಗೆ ಪ್ರತಿಕ್ರಿಯೆಯಾಗಿ, ಕನ್ನಡ ಚಿತ್ರರಂಗದ ನಟಿ ಮತ್ತು ರಾಜಕಾರಣಿ ರಮ್ಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
“ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಉಳಿದವರಿಗೆ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯವು ಸಿಗುತ್ತೆ.ಎಲ್ಲಕ್ಕಿಂತ ಮುಖ್ಯವಾಗಿ, ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಇರಿ” ಎಂದು ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
,ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


