ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮುಗಲಭೆ ಹಾಗೂ ಅದರಿಂದ ಸಮಾಜದಲ್ಲಿ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತು ವಿಧಾನಪರಿಷತ್‍ನಲ್ಲಿ ಗಂಭೀರವಾದ ಚರ್ಚೆ ನಡೆಯಿತು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕಿಶೋರ್ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ರಾಜ್ಯದಲ್ಲಿ ಕೋಮುಸೌಹಾರ್ದತೆ ಮೂಡಿಸುವ ವಿಶೇಷ ಕಾರ್ಯಪಡೆ(ಎಸ್‍ಎಎಫ್) ಕುರಿತು ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಗೃಹಸಚಿವರು, ಸರ್ಕಾರ ತೆಗೆದುಕೊಂಡಿರುವ ಕ್ರಮಗಳು, ವಿಶೇಷ ಕಾರ್ಯಪಡೆ, ಕೋಮುಸೌಹಾರ್ದತೆ ಮರುಕಳಿಸಲು ಬೇಕಾದ ವಾತಾವರಣ ಸೃಷ್ಟಿ, ಕಾನೂನು ಸುವ್ಯವಸ್ಥೆ ಇತ್ಯಾದಿ ಕ್ರಮಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿದರು.
ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಗೃಹಸಚಿವರ ಉತ್ತರಕ್ಕೆ ತೃಪ್ತರಾಗದೆ ಸೌಹಾರ್ದ ವಾತಾವರಣ ಹದಗೆಡಿಸುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಸದಸ್ಯ ಕಿಶೋರ್ ಕುಮಾರ್ ಮಾತನಾಡಿ, ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಗೃಹಸಚಿವರು ಹೇಳುತ್ತಿದ್ದಾರೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ಸುಹಾಸ್ ಶೆಟ್ಟಿ ಕೊಲೆಯಾಯಿತು. ಆದರೆ ಸಚಿವರು ಕೊಲೆಯಾದವರ ಮನೆಗೆ ಮನೆಗೆ ಹೋಗಲಿಲ್ಲ. ಅವರ ತಂದೆತಾಯಿಗಳನ್ನು, ಸಂಬಂಧಿಕರನ್ನು ಭೇಟಿಯಾಗಿ ಸ್ವಾಂತನವನ್ನು ಹೇಳಿಲ್ಲ.
ಆದರೆ ಕೆಲ ದಿನಗಳ ಹಿಂದೆ ಅನ್ಯಕೋಮಿನ ವ್ಯಕ್ತಿಯೊಬ್ಬ ಸತ್ತಿದ್ದಕ್ಕೆ ಅಲ್ಲಿ ಹೋಗಿ ಬಂದಿದ್ದೀರಿ. ನೀವು ಯಾವುದೋ ಜಾತಿ ಅಥವಾ ಧರ್ಮಕ್ಕೆ ಸೀಮಿತರಾದ ಸಚಿವರಲ್ಲ. ಆರು ಕೋಟಿ ಕನ್ನಡಿಗರ ಗೃಹಸಚಿವರು. ಪ್ರತಿಯೊಬ್ಬರ ರಕ್ಷಣೆ ನಿಮ ಕರ್ತವ್ಯ ಎಂದು ಹೇಳಿದರು.
ಇದಕ್ಕೆ ಆಕ್ಷೇಪಿಸಿದ ಕಾಂಗ್ರೆಸ್‍ನ ಐವಾನ್ ಡಿಸೋಜ ಕರಾವಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಗೆ ಯಾರು ಕಾರಣ ಎಂಬುದು ಎಲ್ಲರಿಗೂ ಗೊತ್ತಿದೆ. ಗೃಹಸಚಿವರು ತಾರತಮ್ಯ ಮಾಡದೆ ಕ್ರಮ ಕೈಗೊಂಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು.!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


