Monday, November 2, 2026
spot_img
More
    spot_img
    HomeLatest newsದೇಶದಲ್ಲಿ ನಾಯಿ ಕಡಿತ ಪ್ರಕರಣಗಳು ಎಷ್ಟಿವೆ ಗೊತ್ತ? ಇಲ್ಲಿದೆ ಅಂಕಿಅಂಶದ ವರದಿ

    ದೇಶದಲ್ಲಿ ನಾಯಿ ಕಡಿತ ಪ್ರಕರಣಗಳು ಎಷ್ಟಿವೆ ಗೊತ್ತ? ಇಲ್ಲಿದೆ ಅಂಕಿಅಂಶದ ವರದಿ

    ಓಡಾಡುವವರ ಮೇಲೆ ಬೀದಿ ನಾಯಿಗಳು ದಾಳಿ ನಡೆಸುವ ಪ್ರಕರಣಗಳು ಇತ್ತೀಚಿಗೆ ಜಾಸ್ತಿ ಕೇಳಿ ಬರುತ್ತಿದೆ. ದೆಹಲಿಯಲ್ಲಿ ನಾಯಿ ಕಡಿತ ಮತ್ತು ರೇಬೀಸ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ನವ ದೆಹಲಿ ಮತ್ತು ರಾಷ್ಟ್ರ ರಾಜಧಾನಿ (ಎನ್‌ಸಿಆರ್)‌ ವಲಯದಲ್ಲಿನ ಜನ ವಸತಿ ಪ್ರದೇಶಗಳ ಬಳಿಯಿರುವ ಎಲ್ಲಾ ಬೀದಿ ನಾಯಿಗಳನ್ನು ನಗರ ಹೊರ ವಲಯದಲ್ಲಿರುವ ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

    ಪ್ರಾಣಿ ಸಂರಕ್ಷಣೆ ಕಾರ್ಯಕರ್ತರು ಮತ್ತು ಪ್ರಾಣಿ ಪ್ರೇಮಿಗಳು ನ್ಯಾಯಾಲಯದ ಈ ತೀರ್ಪನ್ನು ವಿರೋಧಿಸಿದ್ದಾರೆ. ಇಲ್ಲಿಯವರೆಗೆ ನಾಯಿ ಕಡಿತದಿಂದ ಸಾವನ್ನಪ್ಪಿದವರ ಸಂಖ್ಯೆ ಎಷ್ಟು ಎಂಬ ಅಂಕಿ ಅಂಶ ಇಲ್ಲಿದೆ.

    2018 ರಲ್ಲಿ, ದೇಶಾದ್ಯಂತ 75.7 ಲಕ್ಷ ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಕೋವಿಡ್ ಅವಧಿಯ ಬಳಿಕ ಇದರಲ್ಲಿ ಇಳಿಕೆ ಕಂಡುಬಂದಿದ್ದು, 2020 ರಲ್ಲಿ 47.6 ಲಕ್ಷ ಪ್ರಕರಣಗಳು ಮತ್ತು 2021 ರಲ್ಲಿ 32.4 ಲಕ್ಷ ಪ್ರಕರಣಗಳು ವರದಿಯಾಗಿವೆ. ಆದರೆ 2023 ರಿಂದ ನಾಯಿ ಕಡಿತದ ಪ್ರಕರಣದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಕಳೆದ ವರ್ಷ ಅಂದರೆ 2024 ರಲ್ಲಿ 37 ಲಕ್ಷಕ್ಕೂ ಹೆಚ್ಚು ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ.

    ದೇಶದ ಹಲವು ರಾಜ್ಯಗಳಲ್ಲಿ ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. 2024 ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 25 ಸಾವಿರಕ್ಕೂ ಹೆಚ್ಚು ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ 4 ಲಕ್ಷದ 85 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ತಮಿಳುನಾಡಿನಲ್ಲಿ ನಾಲ್ಕು ಲಕ್ಷದ 80 ಸಾವಿರ, ಗುಜರಾತ್‌ನಲ್ಲಿ ಮೂರು ಲಕ್ಷದ 92 ಸಾವಿರ, ಕರ್ನಾಟಕದಲ್ಲಿ ಮೂರು ಲಕ್ಷದ 61 ಸಾವಿರ, ಉತ್ತರ ಪ್ರದೇಶದಲ್ಲಿ ಒಂದು ಲಕ್ಷದ 64 ಸಾವಿರ, ರಾಜಸ್ಥಾನದಲ್ಲಿ ಒಂದು ಲಕ್ಷದ 40 ಸಾವಿರ, ಬಿಹಾರದಲ್ಲಿ ಎರಡು ಲಕ್ಷದ 63 ಸಾವಿರ, ಆಂಧ್ರಪ್ರದೇಶದಲ್ಲಿ ಎರಡು ಲಕ್ಷದ 45 ಸಾವಿರ ಮತ್ತು ಅಸ್ಸಾಂನಲ್ಲಿ ಒಂದು ಲಕ್ಷದ 66 ಸಾವಿರ ಪ್ರಕರಣಗಳು ವರದಿಯಾಗಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search