ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸುತ್ತಿದ್ದಂತೆ ರೇಣುಕಾಸ್ವಾಮಿ ಹೆಂಡತಿ ಸಹನಾ, ತಂದೆ ಕಾಶಿನಾಥಯ್ಯ ಹಾಗೂ ತಾಯಿ ರತ್ನಾಪ್ರಭಾ ಪ್ರತಿಕ್ರಿಯೆ ನೀಡಿದ್ದಾರೆ.
‘ನಟ ದರ್ಶನ್ ಅವರ ಜಾಮೀನು ರದ್ದಾಗಿರುವುದು ಸಂತಸ ತಂದಿದೆ. ನಮ್ಮ ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ’ ಎಂದು ರೇಣುಕಸ್ವಾಮಿ ತಾಯಿ ರತ್ನಪ್ರಭಾ ಪ್ರತಿಕ್ರಿಯಿಸಿದ್ದಾರೆ.ನಮ್ಮ ಮನೆಯವರ ಪೂಜೆಗೆ ಕೂತಾಗ ಕೋರ್ಟ್ ಆದೇಶ ಬಂದಿದೆ. ನಮಗೆ ಸಂತೋಷವಾಗಿದೆ. ನನ್ನ ಪತಿ ಪೂಜೆಗೆ ಹೊರಟಾಗಲೇ ನ್ಯಾಯ ಸಿಗುವ ವಿಶ್ವಾಸ ಇತ್ತು’. ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು, ಸುಪ್ರೀಂ ಕೋರ್ಟ್ ಆದೇಶದಿಂದ ನ್ಯಾಯಾಂಗದ ಮೇಲಿನ ವಿಶ್ವಾಸ ಹೆಚ್ಚಾಗಿದೆ’ ಎಂದರು.
ಹೈಕೋರ್ಟ್ ನಲ್ಲಿ ದರ್ಶನ್ ತೂಗುದೀಪ ಸೇರಿ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿದಾಗ ಬೇಸರ ಆಗಿತ್ತು. ನ್ಯಾಯದ ಮೇಲೆ ಸ್ವಲ್ಪ ಪ್ರಮಾಣದಲ್ಲಿ ಅಸಮಾಧಾನ ಇತ್ತು. ಆದರೆ ಇಂದು ಹೈಕೋರ್ಟ್ ನೀಡಿದ್ದ ಆದೇಶ ರದ್ದುಪಡಿಸಿದ್ದುನಮಗೆ ಖುಷಿ ಕೊಟ್ಟಿದೆ. ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸ ತಂದಿದೆ ಎಂದು ಕಾಶಿನಾಥಯ್ಯ ಹೇಳಿದ್ದಾರೆ.
ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕು ಎಂಬುದಷ್ಟೇ ನಮ್ಮ ವಾದ. ನಾವು ಯಾರ ವಿರುದ್ಧವೂ ಇಲ್ಲ. ನನ್ನ ಮಗನನ್ನು ಕ್ರೂರವಾಗಿ ಕೊಂದು ಹಾಕಲಾಗಿತ್ತು. ನಾವೆಲ್ಲರೂ ಇಂದಿಗೂ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದೆೇವೆ. ಆತ ಇಲ್ಲವಾದಮೇಲೆ ಬದುಕು ಕಣ್ಣೀರಿನಲ್ಲಿ ಹೋಗುತ್ತಿದೆ. ನನ್ನ ಮಗನ ಸಾವಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ ಎಂದು ಕಾಶಿನಾಥಯ್ಯ ಭಾವುಕರಾಗಿ ಹೇಳಿದ್ದಾರೆ.
ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ರೇಣುಕಾಸ್ವಾಮಿ ಪತ್ನಿ ಸಹನಾ ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


