Wednesday, November 4, 2026
spot_img
More
    spot_img
    HomeLatest newsಪರಮೇಶ್ವರ್‌ ನಿವಾಸದಲ್ಲಿ ಒಳಮೀಸಲಾತಿ ವರದಿ ಕುರಿತು ನಡೆದ ಸಭೆ

    ಪರಮೇಶ್ವರ್‌ ನಿವಾಸದಲ್ಲಿ ಒಳಮೀಸಲಾತಿ ವರದಿ ಕುರಿತು ನಡೆದ ಸಭೆ

    ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಬುಧವಾರ ರಾತ್ರಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಯಲ್ಲಿ ವಿಶೇಷ ಸಭೆ ನಡೆದಿದೆ.

    ಸಚಿವರಾದ ಹೆಚ್.ಸಿ.ಮಹಾದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ವಿಧಾನಸಭೆಯ ಉಪಾಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

    ವರದಿಯನ್ನು ಆಧರಿಸಿ ಒಳಮೀಸಲಾತಿ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಆದರೆ, ಅದಕ್ಕೂ ಮುನ್ನ ಕೆಲವು ಗೊಂದಲಗಳನ್ನು ಬಗೆಹರಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

    ಇದೇ 16ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ತೀರ್ಮಾನ ಕೈಗೊಂಡು ಜಾರಿಗೊಳಿಸಲಾಗುವುದು. ಅದಕ್ಕೂ ಮುನ್ನ ಸಚಿವ ಹಾಗೂ ಶಾಸಕರಲ್ಲಿ ಒಮತದ ಅಗತ್ಯವಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

    ಕಾಂಗ್ರೆಸ್‍ನಲ್ಲಿ ಒಡಕು ಉಂಟಾಗದಂತೆ ನಿರ್ಣಯ ಕೈಗೊಳ್ಳಬೇಕಿದೆ. ವರದಿ ಜಾರಿಗೊಳಿಸಿದ ಕ್ಷಣವೇ ಎಲ್ಲವೂ ಮುಗಿಯುವುದಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ನಡೆಸುವ ಜನಗಣತಿಯಲ್ಲಿನ ಜಾತಿ ಸಮೀಕ್ಷೆ ಮಾಹಿತಿ ಆಧರಿಸಿ ಮೀಸಲಾತಿಯನ್ನು ಪರಿಷ್ಕರಣೆ ನಡೆಸುವ ಷರತ್ತಿಗೆ ಒಳಪಟ್ಟು ಸದ್ಯಕ್ಕೆ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿಬಂದಿದೆ.

    ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಹೆಚ್.ಸಿ.ಮಹಾದೇವಪ್ಪ, ನಾವೆಲ್ಲಾ ಒಳಮೀಸಲಾತಿಯ ಪರವಾಗಿದ್ದೇವೆ. ಅಧ್ಯಯನ ನಡೆಸಿ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲು ಎಲ್ಲರೂ ಬದ್ಧವಾಗಿದ್ದೇವೆ. ನ್ಯಾ.ನಾಗಮೋಹನ್ ದಾಸ್ ಅವರ ವರದಿಯ ಅಂಶಗಳನ್ನು ಚರ್ಚೆ ಮಾಡುತ್ತಿದ್ದೇವೆ. ನಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಲ್ಲರೂ ಒಳಮೀಸಲಾತಿಯ ಪರವಾಗಿದ್ದೇವೆ ಎಂದು ಪುನರುಚ್ಚರಿಸಿದರು.

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು.!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search