ಬೆಂಗಳೂರು: ಮುಂಗಾರು ಆರ್ಭಟ ಮುಂದುವರಿದಿದ್ದು, ಕರಾವಳಿ, ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಇನ್ನಷ್ಟು ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿಯಲ್ಲಿ ಮುಂದಿನ 4 ದಿನ ಹಾಗೂ ಬೀದರ್, ಕಲಬುರಗಿ, ವಿಜಯಪುರದಲ್ಲಿ ಆ.14ರಿಂದ ಆ.15ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನುಳಿದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ದಾವಣಗೆರೆ ಜಿಲ್ಲೆಯಲ್ಲಿ 13.90 ಲಕ್ಷ ರೂ. ನಷ್ಟ ಸಂಭವಿಸಿದ್ದು, 9 ಮನೆಗಳಿಗೆ ಹಾನಿಯಾಗಿದೆ.
ದರ್ಶನ್ ಜಾಮೀನು ರದ್ದು ಕುರಿತು ರಮ್ಯಾ ಹೀಗೆ ಪೋಸ್ಟ್ ಹಾಕಿದ್ದಾರೆ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


