ಮೈಸೂರಿನಲ್ಲಿ ಅಕ್ಟೋಬರ್ 17ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಈ ಉದ್ಯೋಗಮೇಳದಲ್ಲಿ 200ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗವನ್ನು ಕಲ್ಪಿಸುವ ಉದ್ದೇಶವನ್ನು ಹೊಂದಿವೆ.
ಮೈಸೂರು ಮತ್ತು ಸುತ್ತಮುತ್ತಲಿನ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಬೃಹತ್ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು. ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಸರ್ಕಾರದ ಯುವನಿಧಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡ ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಮೇಳದಲ್ಲಿ ಭಾಗವಹಿಸಲು ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಬಹುದು.
ಕ್ಯಾಂಪಸ್ ಸಂದರ್ಶನ: ಅಕ್ಟೋಬರ್ 17ರಂದು ಕೊಪ್ಪಳದಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಸಹ ಆಯೋಜನೆ ಮಾಡಲಾಗಿದೆ. ಗಿಣಿಗೇರಾದ ಹೊಸಪೇಟೆ ಸ್ಟೀಲ್ಸ್ ಲಿಮಿಟೆಡ್ ಕಂಪನಿ ಬೆಳಗ್ಗೆ 10 ಗಂಟೆಗೆ ತಳಕಲ್‌ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ.
ಈ ಕ್ಯಾಂಪಸ್ ಸಂದರ್ಶನದಲ್ಲಿ ಐಟಿಐ ಎಲ್ಲ ವೃತ್ತಿಗಳು, ಬಿ.ಕಾಂ., ಬಿ.ಎಸ್‌ಸಿ (ಕೆಮಿಸ್ಟ್ರಿ) ಮತ್ತು ಬಿ.ಇ (ಮೆಕ್ಯಾನಿಕಲ್, ಪ್ರೊಡಕ್ಷನ್) ನಲ್ಲಿ ಶೇ.60 ರಷ್ಟು ಅಂಕಗಳನ್ನು ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.
ಭಾಗವಹಿಸುವ ಆಸಕ್ತರು ತಮ್ಮ ವಿದ್ಯಾರ್ಹತೆಯ ಮೂಲ ದಾಖಲಾತಿಗಳು (ಶೇ.60 ಅಂಕಗಳು), ಬ್ಯಾಂಕ್ ಖಾತೆಗೆ ಜೋಡಣೆಯಾಗಿರುವ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್‌ಗಳ ಒಂದು ಸೆಟ್ ಜೆರಾಕ್ಸ್ ಪ್ರತಿಗಳು ಮತ್ತು ಇ-ಕೆವೈಸಿ ಹಾಗೂ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 9740358208, 9945982260, 6363737640 ಹಾಗೂ 8147811887.
ಧಾರವಾಡದಲ್ಲಿ ಕ್ಯಾಂಪಸ್ ಸಂದರ್ಶನ: ಧಾರವಾಡದಲ್ಲಿ ಜಿಲ್ಲಾ ಮಟ್ಟದ ಅಪ್ರೆಂಟಿಸ್ ಮೇಳ-2025 ಅಕ್ಟೋಬರ್ 15ರಂದು ನಡೆಯಲಿದೆ. ಬೆಳಗ್ಗೆ 9 ಗೆಂಟೆಯಿಂದ ಸಂಜೆ 4 ಗೆಂಟೆಯವರೆಗೆ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಅವ್ವಪ್ಪಣ್ಣ ಅತ್ತಿಗೇರಿ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಟೌನ್ ಹಾಲ್‌ನಲ್ಲಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.
30ಕ್ಕೂ ಹೆಚ್ಚು ಕಂಪನಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಲಿವೆ. ಧಾರವಾಡ ಜಿಲ್ಲೆಯ ಸರ್ಕಾರಿ, ಅರೇ ಸರ್ಕಾರಿ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಶಿಶಿಕ್ಷು ಮೇಳ-2025ರ ಉಪಯೋಗವನ್ನು ಪಡೆದುಕೊಳ್ಳಬಹುದು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


