Monday, August 31, 2026
spot_img
More
    spot_img
    HomeSportsCricketFact Check: ಮಹಿಳಾ ವಿಶ್ವಕಪ್‌ನಲ್ಲಿ ಬುರ್ಕಾ ಧರಿಸಿ ಕಣಕ್ಕಿಳಿದ ಬಾಂಗ್ಲಾದೇಶ ತಂಡದ ಆಟಗಾರ್ತಿಯರು!

    Fact Check: ಮಹಿಳಾ ವಿಶ್ವಕಪ್‌ನಲ್ಲಿ ಬುರ್ಕಾ ಧರಿಸಿ ಕಣಕ್ಕಿಳಿದ ಬಾಂಗ್ಲಾದೇಶ ತಂಡದ ಆಟಗಾರ್ತಿಯರು!

    ಸದ್ಯ ಐಸಿಸಿ ವನಿತೆಯರ ಏಕದಿನ ವಿಶ್ವಕಪ್‌ 2025 ನಡೆಯುತ್ತಿದ್ದು, ಕಳೆದ ಶುಕ್ರವಾರ ( ಅಕ್ಟೋಬರ್‌ 10 ) ನಡೆದ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್‌ ತಂಡಗಳ ನಡುವಿನ ಪಂದ್ಯ ಸಾಮಾಜಿಕ ಜಾಲತಾಣದಲ್ಲಿ ವಿಭಿನ್ನ ಕಾರಣಕ್ಕೆ ಸದ್ದು ಮಾಡುತ್ತಿದೆ.

    Advertisement

    ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 227 ರನ್‌ ಕಲೆಹಾಕಿ ಬಾಂಗ್ಲಾದೇಶಕ್ಕೆ 228 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಬಾಂಗ್ಲಾದೇಶ 39.5 ಓವರ್‌ಗಳಲ್ಲಿ 127 ರನ್‌ ಕಲೆಹಾಕಿ ಆಲ್‌ಔಟ್‌ ಆಯಿತು. ಈ ಮೂಲಕ ನ್ಯೂಜಿಲೆಂಡ್‌ 100 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿತು.

    ಇನ್ನು ಈ ಪಂದ್ಯದ್ದು ಎನ್ನಲಾದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಫೋಟೊದಲ್ಲಿ ಬಾಂಗ್ಲಾದೇಶದ ಆಟಗಾರ್ತಿಯರು ಬ್ಯಾಟಿಂಗ್‌ ಮಾಡುವಾಗ ಬುರ್ಕಾ ಧರಿಸಿ ನಿಂತಿದ್ದಾರೆ. ಅನೇಕರು ಈ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಫೋಟೊ ವೈರಲ್‌ ಆಗಿದೆ.

    ಹೀಗೆ ಬಾಂಗ್ಲಾದೇಶದ ಇಬ್ಬರು ಆಟಗಾರ್ತಿಯರು ಬುರ್ಕಾ ಧರಿಸಿ ಬ್ಯಾಟಿಂಗ್‌ ಮಾಡುತ್ತಿರುವ ಫೋಟೊ ನಕಲಿಯಾಗಿದೆ. ಜಿಮಿನೈ ಎಐ ಬಳಸಿ ಈ ಫೋಟೊವನ್ನು ಎಡಿಟ್‌ ಮಾಡಲಾಗಿದ್ದು, ನೇರಪ್ರಸಾರದ ಸ್ಕ್ರೀನ್‌ಶಾಟ್‌ ತೆಗೆದು ಅದಕ್ಕೆ ಬುರ್ಕಾ ಹಾಕಿ ಎಡಿಟ್‌ ಮಾಡಲಾಗಿದೆ.

    ಈ ಮೂಲಕ ಕಿಡಿಗೇಡಿಗಳು ಕ್ರಿಕೆಟ್‌ಗೂ ಕೋಮಿನ ಬಣ್ಣ ಬಳಿಯುವ ಯತ್ನ ಮಾಡಿದ್ದು, ಕೋಮು ಗಲಭೆ ಪ್ರಿಯರು ಇದನ್ನೇ ನಿಜವೆಂದು ನಂಬಿ ದಡ್ಡರ ಹಾಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading