ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್ ಅಭಿಯಾನ ಆರಂಭವಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್ ಅಭಿಯಾನ ಆರಂಭವಾಗಿದೆ. ಪೋಸ್ಟರ್ ಹಿಡಿದು ಆರ್ಎಸ್ಎಸ್ ಸ್ವಯಂ ಸೇವಕರು ಅಭಿಯಾನ ಆರಂಭಿಸಿದ್ದಾರೆ.
ಅಂಗಡಿ, ವಾಹನ, ಕಟ್ಟಡಗಳ ಮೇಲೆ I LOVE RSS ಎಂಬ ಪೋಸ್ಟರ್ ಅಂಟಿಸುತ್ತಿದ್ದಾರೆ. ಈ ಮೂಲಕ ಹೊಸ ಅಭಿಯಾನವನ್ನೇ ಆರಂಭಿಸುತ್ತಿದ್ದಾರೆ. ಸರ್ಕಾರ ದೇಶ ವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಬದಲು ದೇಶ ಭಕ್ತ ಸಂಘಟನೆಗಳನ್ನು ನಿಷೇಧಿಸಲು ಮುಂದಾಗಿದೆ ಎಂದು ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ ಹೆದ್ದಾರಿಗಳಲ್ಲಿ ಅಶುದ್ಧ ಶೌಚಾಲಯ ವರದಿ ಮಾಡಿ 1,000 ರೂ.ಗಳ ಫಾಸ್ಟ್ ಟ್ಯಾಗ್ ರೀಚಾರ್ಜ್ ಗಳಿಸಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


