Tuesday, November 3, 2026
spot_img
More
    spot_img
    HomeBreaking Newsಬಿಹಾರ ಚುನಾವಣೆ ಫಲಿತಾಂಶ: 200 ಸೀಟುಗಳಲ್ಲಿ NDA ಮುನ್ನಡೆ

    ಬಿಹಾರ ಚುನಾವಣೆ ಫಲಿತಾಂಶ: 200 ಸೀಟುಗಳಲ್ಲಿ NDA ಮುನ್ನಡೆ

    ಬಿಹಾರ ವಿಧಾನಸಭೆ ಚುನಾವಣೆ 2025ರ ಮತ ಎಣಿಕೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಶುಕ್ರವಾರ ಮತ ಎಣಿಕೆ ನಡೆಯುತ್ತಿದ್ದು, ಎನ್‌ಡಿಎ ಸರ್ಕಾರ ರಚನೆಯತ್ತ ಮುನ್ನುಗ್ಗುತ್ತಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 122.

    ಬಿಹಾರ ರಾಜ್ಯದ 243 ಸೀಟುಗಳಿಗೆ ನವೆಂಬರ್ 6, 11ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು. ಶುಕ್ರವಾರ ಮತ ಎಣಿಕೆ ಆರಂಭವಾಗಿದೆ. ಸದ್ಯದ ಮಾಹಿತಿಯಂತೆ ಎನ್‌ಡಿಎ 200, ಮಹಾಘಟಬಂಧನ್ 40, ಇತರರು 3 ಸೀಟುಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

    ಮಹಾಘಟಬಂಧನ್ ಮೈತ್ರಿಕೂಟಕ್ಕೆ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಲಿದೆ. ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಎನ್‌ಡಿಎ ಮೈತ್ರಿಕೂಟ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ.

    ಎನ್‌ಡಿಎ ಮೈತ್ರಿಕೂಟದಲ್ಲಿ BJP – 101, JDU – 101, LJP (R) – 29, RLM – 06 ಮತ್ತು HAM – 06 ಸೀಟುಗಳಲ್ಲಿ ಸ್ಪರ್ಧೆ ಮಾಡಿವೆ. ಬಿಜೆಪಿ ಮತ್ತು ಜೆಡಿಯು ಮೈತ್ರಿಕೂಟದ ಪ್ರಮುಖ ಪಕ್ಷಗಳು.

    ಸದ್ಯದ ಮಾಹಿತಿಯಂತೆ BJP – 83 JDU – 80, LJP (R) – 22, RLM – 3 ಮತ್ತು
    HAM – 4 ಸೀಟುಗಳಲ್ಲಿ ಮನ್ನಡೆಯನ್ನು ಕಾಯ್ದುಕೊಂಡಿವೆ.

    ಕಾಂಗ್ರೆಸ್-ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಆರ್‌ಜೆಡಿ32, ಕಾಂಗ್ರೆಸ್ 8, ಎಡಪಕ್ಷಗಳು 7 ಸೀಟುಗಳಲ್ಲಿ ಮುನ್ನಡೆಯನ್ನು ಪಡೆದುಕೊಂಡಿವೆ. ಆರ್‌ಜೆಡಿ ಪಕ್ಷದ ನಾಯಕ, ಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ರಾಘೋಪುರ ಕ್ಷೇತ್ರದಲ್ಲಿ 3016 ಮತಗಳ ಹಿನ್ನಡೆಯನ್ನು ಅನುಭವಿಸಿದ್ದಾರೆ.

    ಎನ್‌ಡಿಎ ಮೈತ್ರಿಕೂಟ ಭಾರೀ ಮುನ್ನಡೆ ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನಿವಾಸದ ಬಳಿ “Bihar Ka Matlab Nitish Kumar” ಎಂಬ ಹೆಸರಿನ ಫ್ಲೆಕ್ಸ್ ಹಾಕಲಾಗುತ್ತಿದೆ.

    4 ಬಾರಿ ಬಿಹಾರವನ್ನು ಮುಖ್ಯಮಂತ್ರಿಯಾಗಿ ಆಳ್ವಿಕೆ ಮಾಡಿರುವ ನಿತೀಶ್ ಕುಮಾರ್ ಅವರ ಶಕ್ತಿಯನ್ನು ತಿಳಿಯಲು ಮಹಾಘಟಬಂಧನ್ ವಿಫಲವಾಗಿದೆ ಎಂಬುದು ಚುನಾವಣೆಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. 2020ರ ಚುನಾವಣೆಯಲ್ಲಿ 19 ಸೀಟುಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ 8 ಸೀಟುಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

    ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಆರ್‌ಜೆಡಿ 143, ಕಾಂಗ್ರೆಸ್ 61, ಸಿಪಿಐ(ಎಂಎಲ್‌) 20 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಉಳಿದ ಕ್ಷೇತ್ರವನ್ನು ವಿಐಪಿ, ಸಿಪಿಐ(ಎಂ) ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಮೈತ್ರಿಕೂಟವು ವಿಕಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮುಖ್ಯಸ್ಥ ಮುಕೇಶ್ ಸಹಾನಿ ಅವರನ್ನು ಡಿಸಿಎಂ ಅಭ್ಯರ್ಥಿ ಎಂದು ಸಹ ಘೋಷಣೆ ಮಾಡಿತ್ತು.

    ಎನ್‌ಡಿಎ ಮೈತ್ರಿಕೂಟ 5ನೇ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ. ಮೊದಲ ಸುತ್ತಿನ ಮತ ಎಣಿಕೆಯಿಂದಲೂ ಮುನ್ನಡೆಯನ್ನು ಕಾಯ್ದುಕೊಂಡಿರುವ ಮೈತ್ರಿಕೂಟ ಫಲಿತಾಂಶ ಘೋಷಣೆ ಬಳಿಕ ಸಿಎಂ ಯಾರು? ಎಂಬ ಬಗ್ಗೆ ಇಕ್ಕಟಿಗೆ ಸಿಲುಕುವ ನಿರೀಕ್ಷೆ ಇದೆ.

    74 ವರ್ಷದ ನಿತೀಶ್ ಕುಮಾರ್ ಆರೋಗ್ಯ ಸರಿ ಇಲ್ಲ ಎಂಬ ಚರ್ಚೆಗಳು ನಡೆದಿವೆ. ಆದ್ದರಿಂದ ಚುನಾವಣೆ ಬಳಿಕ ಹೊಸ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆಯೇ? ಎಂಬುದು ಸದ್ಯ ಚರ್ಚೆಯ ವಿಚಾರವಾಗಿದೆ.

    ನಿತೀಶ್ ಕುಮಾರ್ ನೇತೃತ್ವದಲ್ಲಿಯೇ ಚುನಾವಣೆಗೆ ಹೋಗುತ್ತೇವೆ. ಅವರೇ ನಮ್ಮ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ನಾಯಕರು ಪದೇ ಪದೇ ಹೇಳುತ್ತಿದ್ದರು. ಆದರೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಲೆಕ್ಕಾಚಾರ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

    ಎನ್‌ಡಿಎ ಮತ್ತು ಮಹಾಘಟಬಂಧನ್ ಬಿಹಾರ ಚುನಾವಣೆ 2025ರಲ್ಲಿ ಪ್ರಮುಖ ಎದುರಾಳಿಯಾಗಿದ್ದರು. ಆದರೆ ವಿರೋಧ ಪಕ್ಷಗಳ ಮಹಾಘಟಬಂಧನ್ ಮೈತ್ರಿಕೂಟ ಎನ್‌ಡಿಎಗೆ ಪ್ರಬಲ ಪೈಪೋಟಿ ನೀಡುವಲ್ಲಿ ವಿಫಲವಾಗಿದೆ ಎಂಬುದು ಫಲಿತಾಂಶದಿಂದ ತಿಳಿದುಬರುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search