ಬೆಂಗಳೂರು: ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕ್ಕಳಿಗಾಗಿ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ.ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡಿದೆ. ಈ ವರ್ಷ ಬಜೆಟ್‌ನಲ್ಲಿ ಒಟ್ಟು ₹65,000 ಕೋಟಿ ರೂಪಾಯಿಯನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ.
ರಾಜ್ಯದಲ್ಲಿ ಈ ವರ್ಷ ಒಟ್ಟು 900 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS Karnataka Public Schools) ತೆರೆಯುತ್ತಿದ್ದೇವೆ. ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಲು ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.
ವೈಜ್ಞಾನಿಕ ಮನೋಭಾವ ಮುಖ್ಯ:
ಸಿಎಂ ಸಿದ್ದರಾಮಯ್ಯ ಅವರು, ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಹಾಗಾಗಿ, ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಢ್ಯ ಮತ್ತು ಕಂದಾಚಾರದಿಂದ ದೂರ ಉಳಿಯಬೇಕು ಎಂದು ಕರೆ ನೀಡಿದರು.
ನೆಹರೂ ಅವರು ಮಕ್ಕಳೇ ದೇಶದ ಭವಿಷ್ಯ ಎಂದು ನಂಬಿದ್ದರು. ಹಾಗಾಗಿಯೇ ಅವರು ಐಐಟಿ, ಏಮ್ಸ್‌ನಂತಹ ದೊಡ್ಡ ಸಂಸ್ಥೆಗಳನ್ನು ಸ್ಥಾಪಿಸಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದರು.
ನಾನು ಕೂಡ ಸರ್ಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೇನೆ. ಆದ್ದರಿಂದ ಸರ್ಕಾರಿ ಶಾಲಾ ಮಕ್ಕಳು ಸ್ವಾಭಿಮಾನದಿಂದ ಬೆಳೆಯಲು ಉತ್ತಮ ಶಿಕ್ಷಣ ಪಡೆಯಲು ನಮ್ಮ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.
ಮಕ್ಕಳಿಗೆ ಸಿಗುವ ಸೌಲಭ್ಯಗಳು:
ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲೆಂದು ಸರ್ಕಾರವು ಈ ಕೆಳಗಿನ ಸೌಲಭ್ಯಗಳನ್ನು ನೀಡುತ್ತಿದೆ:ಇಂದಿರಾ ಕಿಟ್,ಶೂ ಮತ್ತು ಸಮವಸ್ತ್ರ,ಮೊಟ್ಟೆ ಮತ್ತು ಬಾಳೆಹಣ್ಣು,ಪಠ್ಯ ಪುಸ್ತಕಗಳು ಮತ್ತು ವಿದ್ಯಾರ್ಥಿವೇತನ ,ಮಕ್ಕಳು ಈ ಸವಲತ್ತುಗಳನ್ನು ಬಳಸಿಕೊಂಡು ದೇಶದ ಆಸ್ತಿಯಾಗಿ ಬೆಳೆಯಬೇಕು ಎಂದು ಸಿಎಂ ಹಾರೈಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


