Sunday, November 8, 2026
spot_img
More
    spot_img
    HomeSportsCricketಟೆಂಬಾ ಬವುಮಾಗೆ ಸಹೋದರಿ ಕುರಿತ ಕೆಟ್ಟ ಪದ ಬಳಸಿ ನಿಂದನೆ: ಸ್ಟಂಪ್‌ ಮೈಕ್‌ನಲ್ಲಿ ಸಿಕ್ಕಿಬಿದ್ದ ಭಾರತದ...

    ಟೆಂಬಾ ಬವುಮಾಗೆ ಸಹೋದರಿ ಕುರಿತ ಕೆಟ್ಟ ಪದ ಬಳಸಿ ನಿಂದನೆ: ಸ್ಟಂಪ್‌ ಮೈಕ್‌ನಲ್ಲಿ ಸಿಕ್ಕಿಬಿದ್ದ ಭಾರತದ ಆಟಗಾರ; ವಿಡಿಯೊ

    ಕೊಲ್ಕತ್ತಾ: ಭಾರತ ಪ್ರವಾಸವನ್ನು ಕೈಗೊಂಡಿರುವ ಹಾಲಿ ವಿಶ್ವ ಟೆಸ್ಟ್‌ ಚಾಂಪಿಯನ್ಸ್‌ ದಕ್ಷಿಣ ಆಫ್ರಿಕಾ ತಂಡ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡುತ್ತಿದ್ದು, ಇಂದು ( ನವೆಂಬರ್‌ 14 ) ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ಆರಂಭಗೊಂಡಿದೆ.

    ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿ 55 ಓವರ್‌ಗಳಿಗೆ 159 ರನ್‌ ಕಲೆಹಾಕಿ ತನ್ನೆಲ್ಲ ವಿಕೆಟ್‌ ಕಳೆದುಕೊಂಡಿದೆ. ಬಳಿಕ ಬ್ಯಾಟಿಂಗ್‌ ಮಾಡಿದ ಭಾರತ ದಿನದಾಟದಂತ್ಯಕ್ಕೆ 20 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 37 ರನ್‌ ಕಲೆಹಾಕಿ 122 ರನ್‌ಗಳ ಹಿನ್ನಡೆಯಲ್ಲಿದೆ.

    ಹೀಗೆ ಮೊದಲ ದಿನದಾಟದಂತ್ಯಕ್ಕೆ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಸಂಪೂರ್ಣ ಹಿಡಿತ ಸಾಧಿಸಿದ ಟೀಮ್‌ ಇಂಡಿಯಾ ದಕ್ಷಿಣ ಆಫ್ರಿಕಾದ ನಾಯಕ ಟೆಂಬಾ ಬವುಮಾ ಕುರಿತು ತಂಡದ ಓರ್ವ ಆಟಗಾರ ಕೆಟ್ಟದಾಗಿ ಮಾತನಾಡಿದ್ದಕ್ಕಾಗಿ ವಿವಾದಕ್ಕೀಡಾಗಿದೆ.

    ದಕ್ಷಿಣ ಆಫ್ರಿಕಾ ಬ್ಯಾಟಿಂಗ್‌ ವೇಳೆ ನಾಯಕ ಟೆಂಬಾ ಬವುಮಾ ಕಣದಲ್ಲಿದ್ದಾಗ ಬುಮ್ರಾ ಎಸೆದ ಚೆಂಡು ಕಾಲಿಗೆ ತಗುಲಿತ್ತು. ಈ ಸಂದರ್ಭದಲ್ಲಿ ಎಲ್‌ಬಿಡಬ್ಲ್ಯೂಗೆ ಡಿಆರ್‌ಎಸ್‌ ತೆಗೆದುಕೊಳ್ಳುವ ವಿಚಾರವಾಗಿ ಬುಮ್ರಾ ವಿಕೆಟ್‌ ಕೀಪರ್‌ ರಿಷಬ್‌ ಪಂತ್‌ ಜತೆ ಚರ್ಚಿಸಲು ಮುಂದಾಗಿದ್ದರು.

    ಈ ವೇಳೆ ಪಂತ್‌ ಹಾಗೂ ಬುಮ್ರಾ ಟೆಂಬಾ ಬುವುಮಾರನ್ನು ʼಬೌನಾʼ ಎಂದು ಹಿಂದಿಯಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಬೌನಾ ಎಂದರೆ ಹಿಂದಿಯಲ್ಲಿ ಕುಳ್ಳ ಎಂಬ ಅರ್ಥವನ್ನು ನೀಡಲಿದೆ. ಇನ್ನು ಪಂತ್‌ ಈ ಪದವನ್ನು ಬಳಕೆ ಮಾಡುತ್ತಿದ್ದಂತೆ ಅತ್ತ ಜಸ್‌ಪ್ರೀತ್‌ ಬುಮ್ರಾ ಮತ್ತದೇ ಪದ ಬಳಕೆ ಮಾಡುವುದರ ಜತೆಗೆ ನಂತರ ಸಹೋದರಿ ನಿಂದನೆಯ ಪದವನ್ನು ಬಳಸಿಬಿಟ್ಟಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕುಳ್ಳ ಎಂದು ಉಲ್ಲೇಖಿಸುವುದು ಮಾತ್ರವಲ್ಲದೇ ನಂತರ ಸಹೋದರಿ ನಿಂದನೆಯ ಪದಬಳಕೆ ಮಾಡುವುದು ಸರಿಯಾದ ನಡೆಯಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search