Tuesday, November 3, 2026
spot_img
More
    spot_img
    HomeLatest newsವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ

    ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ

    ಉಸಿರಾಟದ ಸಮಸ್ಯೆಯಿಂದಾಗಿ ಕಳೆದ ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇಂದು ( ನವೆಂಬರ್‌ 14 ) ಕೊನೆಯುಸಿರೆಳೆದಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.

    ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಲು ಮರದ ತಿಮ್ಮಕ್ಕ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ 12 ಗಂಟೆ ಸಮಯಕ್ಕೆ ಅಸುನೀಗಿದ್ದಾರೆ.

    ತುಮಕೂರಿನ ಗುಬ್ಬಿ ತಾಲೂಕಿನಲ್ಲಿ 1991ರ ಜೂನ್‌ 30ರಂದು ಜನಿಸಿದ್ದ ಸಾಲು ಮರದ ತಿಮ್ಮಕ್ಕ ಹುಲಿಕಲ್‌ ಗ್ರಾಮದ ಚಿಕ್ಕಯ್ಯ ಎಂಬುವರನ್ನು ವಿವಾಹವಾಗಿದ್ದರು. ಮಕ್ಕಳಿರದ ನೋವನ್ನು ಮರೆಯುವ ಸಲುವಾಗಿ ರಸ್ತೆ ಪಕ್ಕ ಗಿಡ ನೆಡುವ ಒಂದೊಳ್ಳೆ ಹವ್ಯಾಸವನ್ನು ಬೆಳೆಸಿಕೊಂಡ ಸಾಲು ಮರದ ತಿಮ್ಮಕ್ಕ ಸಾವಿರಾರು ಮರಗಳಿಗೆ ಜೀವನ ನೀಡುವ ಮೂಲಕ ಜಗತ್ತಿಗೆ ಮಾದರಿಯಾದರು.

    ಹೀಗೆ ಮರಗಳೇ ನಮ್ಮ ಮಕ್ಕಳು ಎಂಬ ವೇದವಾಕ್ಯದೊಂದಿಗೆ ತಮ್ಮ ಜೀವನದಲ್ಲಿ ಸುಮಾರು 8000 ಮರಗಳನ್ನು ಬೆಳೆಸಿದ ಸಾಲು ಮರದ ತಿಮ್ಮಕ್ಕನವರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳು ಸಂದಿವೆ.

    2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಯಲದಿಂದ ಗೌರವ ಡಾಕ್ಟರೇಟ್‌ ಪಡೆದ ಸಾಲು ಮರದ ತಿಮ್ಮಕ್ಕ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, 1995ರಲ್ಲಿ ರಾಷ್ಟ್ರೀಯ ನಾಗರೀಕ ಪ್ರಶಸ್ತಿ, 2010ರಲ್ಲಿ ಹಂಪಿ ವಿಶ್ವವಿದ್ಯಾನಿಲಯದಿಂದ ನಾಡೋಜ ಪ್ರಶಸ್ತಿ, 2006ಲ್ಲಿ ಗಾಡ್‌ಫ್ರೇ ಫಿಲಿಪ್ಸ್‌ ಬ್ರೇವರಿ ಪ್ರಶಸ್ತಿ, 2000ದಲ್ಲಿ ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ ಗಳಿಸಿದ್ದರು. 2016ರಲ್ಲಿ ಬಿಬಿಸಿ ಪ್ರಕಟಿಸಿದ 100 ವುಮೆನ್‌ನಲ್ಲಿ ಇವರೂ ಸಹ ಒಬ್ಬರಾಗಿದ್ದರು.

    ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನತ್ತ ಕಾಂಗ್ರೆಸ್‌: ವೋಟ್‌ ಚೋರಿ ಮಾಡಿದ್ದಾರಲ್ಲ; ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search