ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಯುಐ ಸಿನಿಮಾದ ಪ್ರಮೋಷನ್‌ಗಾಗಿ ಹೈದರಾಬಾದ್‌ಗೆ ತೆರಳಿದ ವೇಳೆ ಉಪೇಂದ್ರ ಅವರು ಪುಷ್ಪಾ-2 ಸಿನಿಮಾದ ನಾಯಕ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡಿದ್ದಾರೆ.
ಪುಷ್ಪ-2 ಸಿನಿಮಾದ ಪ್ರಿಮೀಯರ್ ಶೋ ವೇಳೆ ಕಾಲ್ತುಳಿತದಿಂದ ಸಾವನ್ನಪ್ಪಿದ್ದ ಮಹಿಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಹೊರಬಂದ ನಂತರ ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ ಕುಶಾಲೋಪಾರಿ ವಿಚಾರಿಸುವುದರ ಜೊತೆಗೆ ತಮ್ಮ ಸಿನಿಮಾಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಲಹರಿ ಮ್ಯೂಸಿಕ್‌ನ ಲಹರಿ ವೇಲು ಸಹ ಇದ್ದರು.
ಈ ಹಿಂದೆ ʼಸನ್ ಆಫ್ ಸತ್ಯಮೂರ್ತಿʼ ಸಿನಿಮಾದಲ್ಲಿ ಇವರಿಬ್ಬರು ಒಟ್ಟಿಗೆ ನಟಿಸಿದ್ದರು.
ಉಪೇಂದ್ರ ನಟಿಸಿ ನಿರ್ಮಾಣ ಮಾಡಿರುವ ʼಯುಐʼ ಚಿತ್ರದ ಟ್ರೇಲರ್ ನೋಡಿದ ಬಾಲಿವುಡ್ ನಟ ಅಮೀರ್ ಖಾನ್ ಟ್ರೇಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತಾನು ಕೂಡ ಉಪ್ಪಿ ಅಭಿಮಾನಿ ಎಂದು ಹೇಳಿಕೊಂಡಿದ್ದರು.
ಈಗ ಟಾಲಿವುಡ್‌ನ ಸ್ಟೈಲಿಸ್ ಸ್ಟಾರ್ ಅಲ್ಲು ಅರ್ಜುನ್ ಕೂಡ ಸಾಥ್ ನೀಡಿದ್ದಾರೆ.
ಅಲ್ಲು ಅರ್ಜುನ್ ಭೇಟಿಗೆ ಕಲಾವಿದರ ಲಗ್ಗೆ
ಇನ್ನು ನಟ ಅಲ್ಲು ಅರ್ಜುನ್ ಬಿಡುಗಡೆಯಾಗಿ ಮನೆ ತಲುಪಿದ ಕೂಡಲೇ ಚಿತ್ರರಂಗದ ಹಲವು ಕಲಾವಿದರು ಅಲ್ಲು ಅರ್ಜುನ್ ಭೇಟಿ ಮಾಡಲು ಆಗಮಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಹಾಗೂ ಪತ್ನಿ, ನಟ ವಿಜಯ್ ದೇವರಕೊಂಡ ಸೇರಿದಂತೆ ಹಲವು ಕಲಾವಿದರು ಅಲ್ಲು ಅರ್ಜುನ್ ಭೇಟಿ ಮಾಡಿ ಮಾತನಾಡಿದ್ದಾರೆ.
ಏನಿದು ಅಲ್ಲು ಅರ್ಜುನ್ ಪ್ರಕರಣ?
ಪುಷ್ಪ ದ ರೂಲ್ ಚಿತ್ರದ ಬಿಡುಗಡೆಯ ಹಿಂದಿನ ದಿನ ಹಲವೆಡೆ ಚಿತ್ರದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಈ ಪ್ರದರ್ಶನಕ್ಕೆ ಪ್ರೇಕ್ಷಕರ ಜತೆಗೆ ಅಲ್ಲು ಅರ್ಜುನ್ ಸಹ ಆಗಮಿಸಿದ್ದರು. ಹೀಗಾಗಿ ಜನ ಕಿಕ್ಕಿರಿದು ನೆರೆದಿದ್ದರು. ಆದರೆ ಯಾವುದೇ ಪೊಲೀಸ್ ಭದ್ರತೆಯನ್ನು ನಟ ಅಲ್ಲು ಅರ್ಜುನ್ ಆಯೋಜನೆ ಮಾಡುವಂತೆ ವಿಷಯ ತಿಳಿಸಿರಲಿಲ್ಲ. ಹೀಗಾಗಿ ಕಾಲ್ತುಳಿತ ಸಂಭವಿಸಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಅಲ್ಲದೇ ರೇವತಿ ಪುತ್ರ ಸಹ ಈ ಕಾಲ್ತುಳಿತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


