ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಆಯ್ದುಕೊಂಡರು. ಇದಕ್ಕನುಗುಣವಾಗಿ ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾದ ಬ್ಯಾಟರ್‌ಗಳು 13.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್‌ಗಳಿಸಿ ಆಡುತ್ತಿದ್ದ ವೇಳೆ ಮಳೆ ಬಂದ ಕಾರಣ ದಿನದಾಟ ರದ್ದಾಗಿದೆ.
ಆಸ್ಟ್ರೇಲಿಯಾದ ಬ್ಯಾಟರ್‌ಗಳಾದ ಉಸ್ಮಾನ್ ಖವಾಜಾ 19(47), ನಥನ್ 4(33) ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಇನ್ನು ಭಾರತ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿದ್ದು, ಹರ್ಷಿತ್ ರಾಣಾ ಅವರ ಬದಲಿಗೆ ಆಕಾಶ್ ದೀಪ್ ಹಾಗೂ ರವಿಚಂದ್ರನ್ ಅಶ್ವಿನ್ ಬದಲಿಗೆ ಜಡೇಜಾ ಅವರು ಈ ಪಂದ್ಯದಲ್ಲಿ ಕಣಕ್ಕೆ ಇಳಿದಿದ್ದಾರೆ.
ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್
ಆಸ್ಟ್ರೇಲಿಯಾ ಆಡುವ ಬಳಗ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


