ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಇಂದು (ಡಿಸೆಂಬರ್ 14) ನಿಧನ ಹೊಂದಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರೂ ಸಹ ಆಗಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು. ಇವರು ದೇಶದ ಅತಿ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದರು.
ಇನ್ನು ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಶಂಕರಪ್ಪ ಕೊನೆಯುಸಿರೆಳೆದಿದ್ದಾರೆ.
ಶಾಮನೂರು ಶಿವಶಂಕರಪ್ಪ ಆರೋಗ್ಯದ ಕುರಿತು ಸುದ್ದಿಗಳು ಹರಿದಾಡಿದ್ದಾಗ ಅವರ ಪುತ್ರ, ಸಚಿವ ಎಸ್‌ಎಸ್ ಮಲ್ಲಿಕಾರ್ಜುನ ಪ್ರತಿಕ್ರಿಯಿಸಿ ತಮ್ಮ ತಂದೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇನ್ನೊಂದು ವಾರದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಶಿವಶಂಕರಪ್ಪ ಇಹಲೋಕ ತ್ಯಜಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ನಾಯಕರು ಕಂಬನಿ ಮಿಡಿದಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


