ಧರ್ಮಸಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಐದು ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2 – 1 ಅಂತರದ ಮುನ್ನಡೆ ಸಾಧಿಸಿದೆ.
ಪಂದ್ಯ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆರಿಸಿಕೊಂಡು ದಕ್ಷಿಣ ಆಫ್ರಿಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 117 ರನ್‌ಗೆ ಆಲ್‌ಔಟ್ ಆಗಿ ಭಾರತಕ್ಕೆ 118 ರನ್‌ಗಳ ಸುಲಭ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಭಾರತ 15.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 120 ರನ್ ಕಲೆಹಾಕಿದೆ.
ದಕ್ಷಿಣ ಅಫ್ರಿಕಾ ಇನ್ನಿಂಗ್ಸ್: ತಂಡದ ಪರ ಕ್ವಿಂಟನ್ ಡಿ ಕಾಕ್ 1, ರೀಝಾ ಹೆಂಡ್ರಿಕ್ಸ್ ಡಕ್‌ಔಟ್, ಏಡನ್ ಮಾರ್ಕ್ರಮ್ 61, ಡೆವಾಲ್ಡ್ ಬ್ರೆವಿಸ್ 2, ಟ್ರಿಸ್ಟನ್ ಸ್ಟಬ್ಸ್ 9, ಕಾರ್ಬಿನ್ ಬಾಷ್ 4, ಡೊನೊವೊನ್ ಫೆರೆರಿಯಾ 20, ಮಾರ್ಕೊ ಯಾನ್ಸೆನ್ 2, ಆನ್ರಿಚ್ ನಾರ್ಕಿಯಾ 12, ಆಟ್‌ನಿಲ್ ಬ್ರಾಟ್‌ಮನ್ 1 ಹಾಗೂ ಲುಂಗಿ ಎನ್‌ಗಿಡಿ ಅಜೇಯ 2 ರನ್ ಬಾರಿಸಿದರು.
ಭಾರತದ ಪರ ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಹಾಗೂ ಕುಲ್‌ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಹಾಗೂ ಶಿವಮ್ ದುಬೆ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತದ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 18 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 35 ರನ್ ಚಚ್ಚಿದರು. ಇನ್ನುಳಿದಂತೆ ಶುಬ್‌ಮನ್ ಗಿಲ್ 28, ಸೂರ್ಯಕುಮಾರ್ ಯಾದವ್ 12, ತಿಲಕ್ ವರ್ಮಾ ಅಜೇಯ 25 ರನ್ ಹಾಗೂ ಶಿವಮ್ ದುಬೆ ಅಜೇಯ 10 ರನ್ ಬಾರಿಸಿದರು.
ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್‌ಗಿಡಿ, ಮಾರ್ಕೊ ಯಾನ್ಸೆನ್ ಹಾಗೂ ಕಾರ್ಬಿನ್ ಬಾಷ್ ತಲಾ ಒಂದೊಂದು ವಿಕೆಟ್ ಪಡೆದರು.
ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆ ನಂಬಿ ಮಂಡ್ಯದಿಂದ ಕೊಡಗಿಗೆ ಬಂದ ಯುವಕನಿಗೆ ರಾತ್ರಿಯಿಡೀ ಕಿರುಕುಳ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


