ಧರ್ಮಸಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆರಿಸಿಕೊಂಡಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ದಕ್ಷಿಣ ಆಫ್ರಿಕಾ ಕೇವಲ ಒಂದು ರನ್‌ಗೆ ತನ್ನ ಇಬ್ಬರೂ ಆರಂಭಿಕರ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ. ಅರ್ಷ್‌ದೀಪ್ ಸಿಂಗ್ ಮಾಡಿದ ಮೊದಲ ಓವರ್‌ನಲ್ಲಿ ರೀಝಾ ಹೆಂಡ್ರಿಕ್ಸ್ ಶೂನ್ಯಕ್ಕೆ ಎಲ್‌ಬಿಡಬ್ಲ್ಯೂಗೆ ಔಟ್ ಅದರೆ, ಎರಡನೇ ಓವರ್‌ನಲ್ಲಿ ಕ್ವಿಂಟನ್ ಡಿ ಕಾಕ್ ಕೇವಲ 1 ರನ್‌ಗೆ ಎಲ್‌ಬಿಡಬ್ಲ್ಯೂ ಆಗಿ ಹರ್ಷಿತ್ ರಾಣಾಗೆ ವಿಕೆಟ್ ನೀಡಿದರು.
ಕಳೆದ ಪಂದ್ಯದಲ್ಲಿ ತಂಡಕ್ಕೆ ಆಸರೆಯಾಗಿದ್ದ ಡಿ ಕಾಕ್ ವಿಕೆಟ್ ಬೇಗನೆ ಕಳೆದುಕೊಂಡಿರುವುದು ಹರಿಣಗಳಿಗೆ ಹಿನ್ನಡೆಯನ್ನುಂಟುಮಾಡಿದ್ದು, ಉಳಿದ ಆಟಗಾರರು ಯಾವ ರೀತಿ ತಂಡಕ್ಕೆ ಆಸರೆಯಾಗಲಿದ್ದಾರೆ ಎಂಬುದನ್ನು ನೋಡಬೇಕಿದೆ.
ಇನ್ನು ಐದು ಪಂದ್ಯಗಳ ಟಿಟ್ವೆಂಟಿ ಸರಣಿ ಇದಾಗಿದ್ದು, ಮೊದಲ ಪಂದ್ಯದಲ್ಲಿ ಗೆದ್ದಿದ್ದ ಭಾರತ ಎರಡನೇ ಪಂದ್ಯದಲ್ಲಿ ಸೋಲನ್ನು ಅನುಭವಿಸಿತ್ತು. ಈ ಮೂಲಕ ಸರಣಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿದ್ದು, ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಳ್ಳಲಿದೆ.
ಆಡುವ ಬಳಗಗಳು:
ಭಾರತ: ಅಭಿಷೇಕ್ ಶರ್ಮಾ, ಶುಭ್‌ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷ್‌ದೀಪ್ ಸಿಂಗ್, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ
ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಏಡನ್ ಮಾರ್ಕ್ರಮ್ (ನಾಯಕ), ಡಿವಾಲ್ಡ್ ಬ್ರೆವಿಸ್, ಟ್ರಿಸ್ಟನ್ ಸ್ಟಬ್ಸ್, ಡೊನೊವನ್ ಫೆರೈರಾ, ಮಾರ್ಕೋ ಜಾನ್ಸೆನ್, ಕಾರ್ಬಿನ್ ಬಾಶ್, ಅನ್ರಿಚ್ ನಾರ್ಟ್ಜೆ, ಲುಂಗಿ ನ್ಗಿಡಿ, ಒಟ್ನೀಲ್ ಬಾರ್ಟ್ಮನ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


