ಬೆಂಗಳೂರು: ಪ್ರಸಕ್ತ ಆರ್ಥಿಕ ಸಾಲಿನಲ್ಲಿ 8 ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 72131.13 ಕೋಟಿ ರೂ.ನಷ್ಟು ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ.
ಕಳೆದ ಏಪ್ರಿಲ್‌ನಿಂದ ನವೆಂಬರ್ ಅಂತ್ಯದವರೆಗೆ ಸಂಗ್ರಹವಾಗಿರುವ ತೆರಿಗೆಯಲ್ಲಿ 53522.76 ಕೋಟಿ ರೂ. ಸರಕು ಸೇವಾ ತೆರಿಗೆ, 17594.52ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 1013.85 ಕೋಟಿ ರೂ. ವೃತ್ತಿ ತೆರಿಗೆ ಸೇರಿದೆ.
ಕಳೆದ ಆರ್ಥಿಕ ಸಾಲಿನಲ್ಲಿ ಒಟ್ಟು 102585.52 ಕೋಟಿ ರೂ.ನಷ್ಟು ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿತ್ತು. ಈ ವರ್ಷ ಅದಕ್ಕಿಂತ ಹೆಚ್ಚು ತೆರಿಗೆಗಳ ಸಂಗ್ರಹವಾಗುವ ನಿರೀಕ್ಷೆ ಇದೆ.
ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ ಪ್ರಕಾರ ಅಕ್ಟೋಬರ್‌ನಲ್ಲಿ ವಾಣಿಜ್ಯ ತೆರಿಗೆ ಸಂಗ್ರಹದ ಪ್ರಮಾಣ ಇಳಿಕೆಯಾಗಿದೆ. ಅಕ್ಟೋಬರ್‌ಗೆ ಹೋಲಿಸಿದರೆ 86 ಕೋಟಿ ರೂ. ನಷ್ಟು ನವೆಂಬರ್ ತಿಂಗಳಲ್ಲಿ ಕಡಿಮೆಯಾಗಿದೆ.
ನವೆಂಬರ್ ತಿಂಗಳಲ್ಲಿ 7099.10 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ, 2214.81 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ, 102.91 ಕೋಟಿ ರೂ. ವೃತ್ತಿ ತೆರಿಗೆ ಸೇರಿ ಒಟ್ಟು 9416.82 ಕೋಟಿ ರೂ. ಸಂಗ್ರಹವಾಗಿದೆ. ಅಕ್ಟೋಬರ್ ತಿಂಗಳಲ್ಲಿ ಒಟ್ಟು 9502.84 ಕೋಟಿ ರೂ. ನಷ್ಟು ತೆರಿಗೆ ಸಂಗ್ರಹವಾಗಿತ್ತು. ಅಕ್ಟೋಬರ್‌ಗೆ ಹೋಲಿಸಿದರೆ, ನವೆಂಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ ಸುಮಾರು 190 ಕೋಟಿ ರೂ.ಗಿಂತ ಹೆಚ್ಚು ಕಡಿಮೆಯಾಗಿದೆ.
ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆ ನಂಬಿ ಮಂಡ್ಯದಿಂದ ಕೊಡಗಿಗೆ ಬಂದ ಯುವಕನಿಗೆ ರಾತ್ರಿಯಿಡೀ ಕಿರುಕುಳ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


