Saturday, August 8, 2026
spot_img
More
    spot_img
    HomeTop Storyಅಬಕಾರಿ ನೀತಿ ಪ್ರಕರಣ: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌

    ಅಬಕಾರಿ ನೀತಿ ಪ್ರಕರಣ: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌

    ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್‌ ಶಾಕ್‌ ನೀಡಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ.

    Advertisement

    ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಇಡಿಗೆ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೇಂದ್ರ ತನಿಖಾ ಸಂಸ್ಥೆಯು 56 ವರ್ಷದ ರಾಜಕಾರಣಿಯ ವಿರುದ್ಧ ಕಳೆದ ವರ್ಷ ಮಾರ್ಚ್‌ನಲ್ಲಿ ಬಂಧಿಸಿದ ನಂತರ ಅವರ ವಿರುದ್ಧ ವಿಶೇಷ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಿದೆ.

    ಫೆಬ್ರವರಿ.5ರಂದು ನಿಗದಿಯಾಗಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.

    ಇನ್ನು ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿ ಅಬಕಾರಿ ಹಗರಣದ ಪ್ರಮುಖ ಆರೋಪಿ ಹಾಗೂ ಪ್ರಮುಖ ಸಂಚುಕೋರ ಎಂದು ಇಡಿ ಕರೆದಿದೆ.

    ಇದರ ಜೊತೆಗೆ ದೆಹಲಿ ಸರ್ಕಾರದ ಸಚಿವರು, ಎಎಪಿ ನಾಯಕರು ಮತ್ತು ಇತರರೊಂದಿಗೆ ಕೇಜ್ರಿವಾಲ್‌ ಅವರು ಶಾಮೀಲಾಗಿದ್ದಾರೆ ಎಂದು ಇಡಿ ಆರೋಪಿಸಿದೆ.

    ಒಟ್ಟಾರೆಯಾಗಿ ದೆಹಲಿ ಚುನಾವಣೆಗೂ ಮುನ್ನವೇ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್‌ ಶಾಕ್‌ ನೀಡಿದ್ದು, ಇಡಿ ಅಧಿಕಾರಿಗಳು ಈ ವಾರದಲ್ಲೇ ನೋಟಿಸ್‌ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದು ವೇಳೆ ಇಡಿ ಅಧಿಕಾರಿಗಳ ತನಿಖೆಯಿಂದ ಕೇಜ್ರಿವಾಲ್‌ ವಿರುದ್ಧದ ಆರೋಪ ಸಾಬೀತಾದರೆ, ಚುನಾವಣೆಯ ಮೇಲೆ ಭಾರೀ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading