ಬೆಂಗಳೂರು: ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಿನ್ನೆ ( ಮಾರ್ಚ್ 14 ) ಕೈವಾರ ತಾತಯ್ಯ ಯೋಗಿ ನಾರೇಯಣ ಯತೀಂದ್ರರ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿವಿಧ ನಾಯಕರು ಆಗಮಿಸಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಲು ಬಂದ ಪ್ರದೀಪ್ ಈಶ್ವರ್ ಬಿಜೆಪಿ ಪರ ಮಾತನಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಏಕಾಏಕಿ ರೋಷಾವೇಶದ ಮಾತುಗಳನ್ನಾಡಿದರು.
ಈ ವೇಳೆ ಬೆಂಗಳೂರು ಸೆಂಟ್ರಲ್ ಬಿಜೆಪಿ ಸಂಸದ ಪಿಸಿ ಮೋಹನ್ ವಿರುದ್ಧ ಪ್ರದೀಪ್ ಈಶ್ವರ್ ಕಿಡಿಕಾರಿದರು. ರಾಜ್ಯದಲ್ಲಿರುವುದು ಸಿದ್ದರಾಮಯ್ಯನ ಸರ್ಕಾರ ನಿಮ್ಮಪ್ಪನ ಸರ್ಕಾರ ಅಲ್ಲ, ನಿಮ್ಮ ಪಕ್ಷವನ್ನು ಹೊಗಳೋಕೆ ಇದು ಬಿಜೆಪಿ ಕಾರ್ಯಕ್ರಮ ಅಲ್ಲ ಎಂದು ಕಿಡಿಕಾರಿದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ಪ್ರದೀಪ್ ಈಶ್ವರ್ ವಿರುದ್ಧ ಕಿಡಿಕಾರಿದರು. ಪಿಸಿ ಮೋಹನ್ ನಾನು ಕಾರ್ಯಕ್ರಮದಲ್ಲಿ ಇರಬೇಕಾ ಬೇಡ್ವಾ ಹೇಳಿ ಎಂದು ಪ್ರದೀಪ್ ಈಶ್ವರ್ ವಿರುದ್ಧ ಜೋರು ದನಿಯಲ್ಲಿ ಕೇಳಿದರು. ನಂತರ ಕಾರ್ಯಕ್ರಮದಲ್ಲಿದ್ದ ಇತರರು ಸಮಾಧಾನಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


