ನವದೆಹಲಿ: ಶಾಸನಸಭೆ ಅಂಗೀಕರಿಸಿದ ವಿಧೇಯಕಗಳಿಗೆ ಅಂಕಿತ ಹಾಕುವ ವಿಚಾರವಾಗಿ ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಿರುವ ಏಪ್ರಿಲ್ 8ರ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ವಿಧೇಯಕಗಳಿಗೆ ಸಹಿ ಹಾಕದೇ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಹಾಗೂ ನ್ಯಾ. ಆರ್. ಮಹಾದೇವನ್ ಅವರಿದ್ದ ಪೀಠ, ವಿಧೇಯಕಗಳಿಗೆ ಅಂಕಿತ ಹಾಕುವುದಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿದೆ.
ತೀರ್ಪು ಪರಿಶೀಲನೆ ಕೋರಲು ಮುಂದಾಗಿರುವ ಸರಕಾರ, ಸಂವಿಧಾನದ ಕಲಂ 201ರಲ್ಲಿ ರಾಷ್ಟ್ರಪತಿಗಳಿಗೆ ನೀಡಿದ ಅಧಿಕಾರ ಮೊಟುಕುಗೊಳಿಸಿದ ಕ್ರಮ ಪ್ರಶ್ನಿಸಲು ಮುಂದಾಗಿದೆ. ಜತೆಗೆ ಸಂವಿಧಾನದ ಕಲಂ 200ರ ಅಡಿಯಲ್ಲಿ ರಾಜ್ಯಪಾಲರಿಗೆ ನೀಡಲಾದ ಅಧಿಕಾರಕ್ಕೆ ಕತ್ತರಿ ಹಾಕಿರುವುದನ್ನು ಪ್ರಶ್ನಿಸುವ ಸಾಧ್ಯತೆಯಿದೆ.
ಪ್ರಕರಣದಲ್ಲಿ ಕೇಂದ್ರ ಸರಕಾರದ ವಾದವನ್ನು ಮಂಡಿಸಲು ಸಾಧ್ಯವಾಗಿಲ್ಲ. ರಾಷ್ಟ್ರಪತಿಗಳ ವಾದವನ್ನು ಕೋರ್ಟ್ ಆಲಿಸಿಲ್ಲ. ಹೀಗಾಗಿ ಏಕಪಕ್ಷೀಯವಾಗಿ ನೀಡಲಾದ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಕೋರಿ ಕೇಂದ್ರ ಸರಕಾರ ಅರ್ಜಿ ಸಲ್ಲಿಸುವ ಸಂಭವವಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


