ಬೆಂಗಳೂರು: ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇದೇ ಏಪ್ರಿಲ್.17ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು, ಜಾತಿ ಗಣತಿ ವರದಿಯಲ್ಲಿ ಒಕ್ಕಲಿಗೆ ಸಮುದಾಯಕ್ಕೆ ಅನ್ಯಾಯವಾದರೆ ಒಕ್ಕಲಿಗೆ ಸಮುದಾಯ ಸಿಡಿದೇಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು ಇಂದು ಸ್ಮಾರ್ಟ್ ಸಿಟಿ ಆಗಬೇಕಾದರೆ ಕಾರಣ ನಮ್ಮ ಕೆಂಪೇಗೌಡರು. ನಾವು ಜಾತಿಗಣತಿ ವಿರೋಧಿಗಳಲ್ಲ. ಆದರೆ ತಪ್ಪು ಲೆಕ್ಕದಿಂದ ಶಕ್ತಿ ಕುಂದಿಸಲು ಆಗಲ್ಲ. ಒಕ್ಕಲಿಗೆ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


