Saturday, May 9, 2026
spot_img
More
    spot_img
    HomeLatest newsಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಶರಣ ಪ್ರಕಾಶ್ ಪಟೇಲ್

    ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಶರಣ ಪ್ರಕಾಶ್ ಪಟೇಲ್

    ಬೆಂಗಳೂರು: ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ,
    ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದರು.

    ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ವಿಕಾಸ ಸೌಧದಲ್ಲಿ
    ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರು ಆತಂಕಪಡಬಾರದು ಎಂದರು.

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ ಎನ್ನುವ ಸುದ್ದಿ ಕೇಳಿ ಜಯದೇವ ಆಸ್ಫತ್ರೆ ಸೇರಿದಂತೆ ಆನೇಕ ಆಸ್ಫತ್ರೆಗಳಲ್ಲಿ ರೋಗಿಗಳ ಸಂಖ್ಯೆ ಮತ್ತು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ವಿಚಿತ್ರ ಸನ್ನಿವೇಶ ಎದುರಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ. ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ. ಹಾಸನ ಜಿಲ್ಲೆಯಲ್ಲಿ ಮಾತ್ರ ಪ್ರಕರಣ ಬೇರೆ ಆಗಿದೆ ಅನ್ನೋದು ತಪ್ಪು ಎಂದು ಹೇಳಿದರು.

    ಹೃದಯಾಘಾತದ ಆತಂಕ ಕೈಬಿಟ್ಟು ಉತ್ತಮ ಜೀವನಶೈಲಿ, ಅಗತ್ಯ ನಿದ್ರೆ ಮತ್ತು ದೈಹಿಕ ವ್ಯಾಯಾಮ ಮಾಡುವುದು ಅಗತ್ಯ. ಹೃದಯಾಘಾತದ ರೋಗ ಲಕ್ಷಣಗಳು ಇದ್ದರೆ ಮಾತ್ರ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ. ಸುಖಾಸುಮ್ಮನೆ ಹೋಗಬೇಡಿ, ಎಂದು ಕಿವಿಮಾತು ಹೇಳಿದರು.

    ಇನ್ನು ಹಾಸನ ಪ್ರಕರಣದಲ್ಲಿ 24 ಮಂದಿ ಮೃತರ ಕುರಿತು ಅಧ್ಯಯನ ನಡೆಸಲಾಗುತ್ತಿದೆ. 20 ಪ್ರಕರಣಗಳಲ್ಲಿ 10 ಹಾರ್ಟ್ ಅಟ್ಯಾಕ್ ಆಗಿದೆ. ಇತರೆ ಕಾರಣಗಳಿಂದ ಸಾವು ಸಂಭವಿಸಿವೆ ಎನ್ನುವುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ಪಾಟೀಲರು ಹೇಳಿದರು.

    ನಿತ್ಯ ಪುಷ್ಪದ ಹೂವಿನಲ್ಲಿ ಅಡಗಿದೆ ಮಧುಮೇಹದಿಂದ ಕ್ಯಾನ್ಸರ್ ವರೆಗೆ ಪರಿಹಾರ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading