ಮಳವಳ್ಳಿ: ಬಸ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ಸಮೀಪದ ಮುತ್ತತ್ತಿ ಬಳಿಯ ಕಾವೇರಿ ವನ್ಯಜೀವಿ ವಲಯ ದಲ್ಲಿ ಭಾನುವಾರ ಸಂಜೆ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಕ್ಕಾಗಿ ಬಂದಿದ್ದ ಖಾಸಗಿ ಬಸ್ ಹಲಗೂರು ಕಡೆ ಹೋಗುತ್ತಿದ್ದ ವೇಳೆ ಕಾವೇರಿ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್ ಬಳಿ ಜಿಂಕೆ ರಸ್ತೆ ದಾಟುತ್ತಿದ್ದಾಗ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಘಟನೆ ಬಳಿಕ ಚಾಲಕ ಬಸ್ ನಿಲ್ಲಿಸದೇ ಪರಾರಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ತಾಳವಾಡಿಯ ಚೆಕ್ಪೋಸ್ಟ್ ಬಳಿ ವಾಹನವನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಮೋದ್ ಕುಮಾರ್ ದೇವ್, ಉಪವಲಯ ಅರಣ್ಯಾಧಿಕಾರಿ ಸಾಜು ಫ್ರಾನ್ಸಿಸ್, ಸಿಬ್ಬಂದಿಗಳಾದ ಮೋಹನ್ ಕುಮಾರ್, ಮಹದೇವ್ ನಾಡಗೌಡ ಇತರರಿದ್ದರು.
ಮೈಸೂರು: ವೈದ್ಯರ ವರ್ತನೆಗೆ ರೋಸಿಹೋಗಿ ಆಸ್ಪತ್ರೆ ಮುಂದೆಯೇ ಪ್ರತಿಭಟನೆ ನಡೆಸಿದ ರೋಗಿಗಳು
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
,
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


