ಉಡುಪಿ: ಗೃಹಲಕ್ಷ್ಮಿಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ ಹೇಳಿದರು.
ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗಣೇಶ ಚತುರ್ಥಿ ಒಳಗೆ ಜುಲೈ ತಿಂಗಳ ಹಣವೂ ಹಣ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು. ಮಾಜಿ ಸಚಿವ ಕೆ.ಎನ್. ರಾಜಣ್ಣ ಪುತ್ರನಿಗೆ ಸಚಿವ ಸ್ಥಾನ ಕೊಡಬೇಕೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಬ್ಬಾಳ, ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದೇ ಅಂತಿಮ ಎಂದರು.
ಕೋರ್ಟ್ ತೀರ್ಪಿಗೆ ತಲೆಬಾಗಬೇಕು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಏಳು ಸಹಚರರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಿದ ಸಚಿವರು, ನ್ಯಾಯಾಲಯ ತೀರ್ಪು ಕೊಟ್ಟ ನಂತರ ನಾವೆಲ್ಲರೂ ಅದಕ್ಕೆ ತಲೆಬಾಗಲೇಬೇಕು ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು.!
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


