Wednesday, May 13, 2026
spot_img
More
    spot_img
    HomeLatest news24 ಗಂಟೆಯಲ್ಲಿ ತುರ್ತು ಬಿಪಿಎಲ್‌ ಕಾರ್ಡ್: ರಾಜ್ಯ ಸರ್ಕಾರದ ಹೊಸ ಪೋರ್ಟಲ್

    24 ಗಂಟೆಯಲ್ಲಿ ತುರ್ತು ಬಿಪಿಎಲ್‌ ಕಾರ್ಡ್: ರಾಜ್ಯ ಸರ್ಕಾರದ ಹೊಸ ಪೋರ್ಟಲ್

    ಅನಾರೋಗ್ಯದಿಂದ ಬಳಲುತ್ತಿರುವವರಿಗೆ ತುರ್ತು ವೈದ್ಯಕೀಯ ಸೇವೆಗಳು ಸುಲಭವಾಗಿ ಸಿಗುವಂತೆ ಮಾಡಲು, ರಾಜ್ಯ ಸರ್ಕಾರವು ಒಂದು ಹೊಸ ವ್ಯವಸ್ಥೆಯನ್ನು ಪರಿಚಯಿಸಲಿದೆ.ಅನಾರೋಗ್ಯಪೀಡಿತರಿಗೆ ಆದ್ಯತೆ ನೀಡುವ ಉದ್ದೇಶದಿಂದ, ಬಿಪಿಎಲ್ ಕಾರ್ಡ್ ವಿತರಣೆಗೆಂದೇ ಪ್ರತ್ಯೇಕ ಆನ್‌ಲೈನ್ ಪೋರ್ಟಲ್ ಆರಂಭಿಸಲಾಗುವುದು.

    ಈ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದರೆ, 24 ಗಂಟೆಗಳೊಳಗೆ ಬಿಪಿಎಲ್ ಕಾರ್ಡ್‌ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು, ಅನರ್ಹರ ಬಳಿ ಇರುವ 13 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವ ಕುರಿತು ಪ್ರತಿಪಕ್ಷಗಳ ಸಹಮತ ಪಡೆದ ನಂತರವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಅಲ್ಲಿಯವರೆಗೆ, ವೈದ್ಯಕೀಯ ತುರ್ತು ಅಗತ್ಯಗಳಿಗಾಗಿ ಈ ಹೊಸ ಪೋರ್ಟಲ್ ವ್ಯವಸ್ಥೆ ಜಾರಿಯಲ್ಲಿರುತ್ತದೆ.

    ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಡಾ. ವೈ. ಭರತ್ ಶೆಟ್ಟಿ ಮತ್ತು ಕೆ. ಗೋಪಾಲಯ್ಯ ಅವರು ಬಿಪಿಎಲ್ ಕಾರ್ಡ್‌ಗಳ ವಿತರಣೆಯಲ್ಲಿರುವ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರು.ರಾಜ್ಯದಲ್ಲಿ ಹಲವು ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ನೀಡುತ್ತಿಲ್ಲ. ಇದರಿಂದಾಗಿ ಲಕ್ಷಾಂತರ ಬಡವರು ತುರ್ತು ವೈದ್ಯಕೀಯ ಸೇವೆ ಪಡೆಯಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ದೂರಿದರು.

    ತುರ್ತು ಚಿಕಿತ್ಸೆಗೂ ಬಿಪಿಎಲ್ ಸೌಲಭ್ಯ ಸಿಗುತ್ತಿಲ್ಲ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ತಿಂಗಳಿಗೊಮ್ಮೆ ಮಾತ್ರ ಅವಕಾಶ ನೀಡಲಾಗುತ್ತದೆ, ಮತ್ತು ಅದರ ಬಗ್ಗೆ ಜನರಿಗೆ ಮಾಹಿತಿ ಇರುವುದಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.ಇನ್ನೊಂದೆಡೆ ಎಪಿಎಲ್‌ ಕಾರ್ಡ್‌ದಾರರಿಗೆ 15 ರೂ. ದರಲ್ಲಿಅಕ್ಕಿ ವಿತರಣೆ ವ್ಯವಸ್ಥೆಯಿದ್ದರೂ ಅಕ್ಕಿ ನೀಡದಿರಲು ಕಾರಣವೇನು, ಎಂದು ಪ್ರಶ್ನಿಸಿದರು.

    ಬೆಂಗಳೂರಿನಲ್ಲಿವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಎಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಅಕ್ಕಿ ನೀಡುತ್ತಿಲ್ಲ, ಎಂದು ದೂರಿದರು.ಬಳಿಕ ಉತ್ತರಿಸಿದ ಮುನಿಯಪ್ಪ, ರಾಜ್ಯದಲ್ಲಿಸುಮಾರು 25 ಲಕ್ಷ ಎಪಿಎಲ್‌ ಕಾರ್ಡ್‌ದಾರರಿದ್ದು, ಅದರಲ್ಲಿಒಂದು ಲಕ್ಷದಷ್ಟು ಕಾರ್ಡ್‌ದಾರರೂ ಪಡಿತರ ಪಡೆಯದ ಕಾರಣ ಸದ್ಯಕ್ಕೆ ಅಕ್ಕಿ ವಿತರಣೆ ಸ್ಥಗಿತಗೊಳಿಸಲಾಗಿದೆ, ಎಂದರು.

    ಎಸ್‌ಐಟಿ ಮುಂದೆ 13 ವರ್ಷದ ಹಿಂದಿನ ಕೇಸ್: ಧರ್ಮಸ್ಥಳಕ್ಕೆ ತೆರಳಿದ್ದ ಯುವತಿ ನಾಪತ್ತೆ, ಸಹೋದರನಿಂದ ದೂರು

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading