ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ನಂಬರ್ ಹ್ಯಾಕ್ ಆಗಿದೆ.
ಕಿಡಿಗೇಡಿಗಳು ಉಪೇಂದ್ರ ದಂಪತಿಯ ಫೋನ್ ನಂಬರ್ ಹ್ಯಾಕ್ ಮಾಡಿದ್ದು, ಮೆಸೇಜ್‌ಗಳ ಮೂಲಕ ಹಣ ಹಾಕುವಂತೆ ಕೇಳುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ವಿಡಿಯೋ ಮೂಲಕ ಮಾಹಿತಿ ನೀಡಿದ್ದು, ನನ್ನ ಹಾಗೂ ಪತ್ನಿ ಪ್ರಿಯಾಂಕಾ ಅವರ ಫೋನ್ ನಂಬರ್‌ಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಫೋನ್ ಮೂಲಕ ಬರಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅರ್ಜೆಂಟಾಗಿ ಹಣ ನೀಡುವಂತೆ ಮೆಸೇಜ್ ಕಳುಹಿಸುತ್ತಿದ್ದಾರೆ.
ನಮ್ಮ ಫೋನ್ ನಂಬರ್‌ಗಳಿಂದ ಕರೆ ಅಥವಾ ಮೆಸೇಜ್ ಬಂದರೆ ದಯವಿಟ್ಟು ಯಾರೂ ಹಣ ಹಾಕಬೇಡಿ. ಫೋನ್ ನಂಬರ್ ಹ್ಯಾಕ್ ಆಗಿದೆ ಎಂದು ಹೇಳಿದ್ದಾರೆ.
ಫೋನ್ ನಂಬರ್ ಹ್ಯಾಕ್ ಆಗಿರುವ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸುವುದಾಗಿಯೂ ಉಪೇಂದ್ರ ಹಾಗೂ ಪ್ರಿಯಾಂಕಾ ತಿಳಿಸಿದ್ದಾರೆ.
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


