ಬೆಂಗಳೂರು: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿಯಾಗುವ ಅವಕಾಶ ಮಾಡಿಕೊಡುವ ವಿಶ್ವಾಸವಿದೆ ಎಂದು ಕ್ಷೇತ್ರದ ಶಾಸಕ ಡಾ. ಎಚ್.ಸಿ. ಬಾಲಕೃಷ್ಣ ಪುನರುಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನವೆಂಬರ್ ಅಥವಾ ಡಿಸೆಂಬರ್‍ನಲ್ಲಿ ಯಾವುದೇ ಕ್ರಾಂತಿಯಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳು ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಮಂಥವರ ಹಂತದಲ್ಲಿ ಈ ರೀತಿಯ ಚರ್ಚೆಗಳು ಸಾಧುವಲ್ಲ ಎಂದರು.
ಸಂಪುಟ ಪುನಾರಚನೆಯಾದರೆ, ನನ್ನ ಹಿರಿತನಕ್ಕೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಒಂದು ವೇಳೆ ಪುನಾರಚನೆಯಾಗದೆ ಇದ್ದರೆ ಅವಕಾಶ ಮಾಡಿಕೊಡಿ ಎಂದು ಕೇಳುವ ಸಾಧ್ಯತೆಯೂ ಇರುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕಮಾರ್ ಅವರ ಕಾಣಿಕೆಯಿದೆ. ಅದನ್ನು ಪರಿಗಣಿಸಿ, ಅವಕಾಶ ನೀಡಬಹುದು. ಹೈಕಮಾಂಡ್ ಗಮನಕ್ಕೂ ನನ್ನ ಹಿರಿತನದ ಬಗ್ಗೆ ಮಾಹಿತಿ ಇದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಈ ವಿಚಾರವಾಗಿ ಭರವಸೆ ಕೊಟ್ಟಿದ್ದಾರೆ. ನನಗೂ ವಿಶ್ವಾಸವಿದೆ ಎಂದರು.
ತಮಿಳುನಾಡು ಮಾದರಿಯಲ್ಲಿ ಆರ್‌ಎಸ್‌ಎಸ್ ಮೇಲೆ ನಿರ್ಬಂಧ ಹೇರಲು ರಾಜ್ಯ ಸರ್ಕಾರದ ಸಿದ್ಧತೆ?
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


