ಬೆಂಗಳೂರು: ಸರ್ಕಾರಿ ಆಸ್ತಿಗಳಲ್ಲಿ ಸ್ಥಳೀಯ ಸಂಸ್ಥೆಗಳ ಒಪ್ಪಿಗೆ ಪಡೆಯದೆ ಯಾವುದೇ ರೀತಿಯ ಚಟುವಟಿಕೆಗಳನ್ನು ಆರ್ ಎಸ್ ಎಸ್ ನಡೆಸದಂತೆ ರಾಜ್ಯ ಸರ್ಕಾರ ತಮಿಳುನಾಡು ಮಾದರಿಯಲ್ಲಿ ನಿರ್ಬಂಧ ಹಾಕಲು ಮುಂದಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನೀಡಿರುವ ವರದಿ ಅನುಸಾರ ಇನ್ನು ಮುಂದೆ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ತನ್ನ ಚಟುವಟಿಕೆಗಳನ್ನು ನಡೆಸಬೇಕಾದರೆ ಕಡ್ಡಾಯವಾಗಿ ಅನುಮತಿಯನ್ನು ಪಡೆಯಲೇಬೇಕು.ಒಂದು ವೇಳೆ ನಿಯಮಗಳನ್ನು ಉಲ್ಲಂಸಿದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವ ಅವಕಾಶ ಇರಲಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆರ್ ಎಸ್ ಎಸ್ ನ ಚಟುವಟಿಕೆಗಳಿಗೆ ಅಂಕುಶ ಹಾಕುವ ತೀರ್ಮಾನವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಕಳೆದ ಅಕ್ಟೋಬರ್ 12 ರಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸರಕಾರಿ ಶಾಲಾ ಕಾಲೇಜುಗಳು ಆವರಣ ಉದ್ಯಾನವನ, ಆಟದ ಮೈದಾನ ಸೇರಿದಂತೆ ಸರ್ಕಾರಿ ಆಸ್ತಿಗಳಲ್ಲಿ ಆರ್ ಎಸ್ ಎಸ್ ನ ಚಟುವಟಿಕೆಗಳನ್ನು ನಿರ್ಬಂಧಿಸಬೇಕೆಂದು ಕೋರಿದ್ದರು.
ಈ ಪತ್ರದ ಅನುಸಾರ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಗೆ ಪತ್ರ ಬರೆದು ಕಾನೂನುನಡಿ ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ಕೊಟ್ಟಿದ್ದರು. ಇದೀಗ ಸಿಎಂ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳು, ಕಾರ್ಯಕ್ರಮಗಳಿಗೆ ಯಾವ ನಿಯಮದಲ್ಲಿ ನಿರ್ಬಂಧ ಹಾಕಲಾಗಿದೆ ಎಂಬುದನ್ನು ಅಧ್ಯಯನ ನಡೆಸಿ ಸರಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ.
ಇದರ ಪ್ರಕಾರ ಇನ್ನು ಮುಂದೆ ಆರ್ ಎಸ್ ಎಸ್ ಸರ್ಕಾರಿ ಆಸ್ತಿಗಳು, ಸರ್ಕಾರಿ ಜಾಗ, ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳು, ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳು, ಜನನಿಬಿಡ ಸ್ಥಳಗಳು, ಸೇರಿದಂತೆ ಮತ್ತಿತರ ಕಡೆ ಕಡಿವಾಣ ಹಾಕಬಹುದು ಎಂದು ಸಲಹೆ ಕೊಟ್ಟಿದ್ದಾರೆ. ಪಕ್ಕದ ತಮಿಳುನಾಡಿನಲ್ಲಿ ಈಗಾಗಲೇ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಷರತ್ತು ಬದ್ಧ ಹಾಗೂ ಪೂರ್ವ ಅನುಮತಿ ಪಡೆದು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂಬ ನಿಯಮವನ್ನು ಅನುಷ್ಠಾನ ಮಾಡಲಾಗಿದೆ.ರಾಜ್ಯದಲ್ಲೂ ಇದೇ ಮಾದರಿಯಲ್ಲಿ ಏನು ಮುಂದೆ ಸಂಗದ ಚಟುವಟಿಕೆಗಳಿಗೆ ನಿಯಮಗಳನ್ನು ಸಂಘ ಸಂಸ್ಥೆಗಳ ಮೂಲಕ ರೂಪಿಸುವಂತೆ ನಿರ್ದೇಶನ ನೀಡಲಾಗಿದೆ.
ಈ ಮೊದಲು ಆರ್ ಎಸ್ ಎಸ್ ಕಾರ್ಯಕರ್ತರು ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯದೆ ಎಲ್ಲೆಂದರಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದರು. ವಿಶೇಷವಾಗಿ ಉದ್ಯಾನವನ ಆಟದ ಮೈದಾನ ಕ್ರೀಡಾಂಗಣ ಮತ್ತಿತರ ಕಡೆ ಪಥಸಂಚಲನ ನಡೆಸಲಾಗುತ್ತಿತ್ತು. ಇದಕ್ಕೆ ಪೊಲೀಸರ ಅನುಮತಿಯನ್ನು ಸಹ ಪಡೆಯುತ್ತಿರಲಿಲ್ಲ. ಆರ್ ಎಸ್ ಎಸ್ ಪಥ ಸಂಚಲನಕ್ಕೆ ಒಂದು ಕಡೆ ಸದಾಭಿಪ್ರಾಯ ವ್ಯಕ್ತವಾದರೆ ,ಮತ್ತೊಂದು ಕಡೆ ವಿರೋಧವು ಕೇಳಿ ಬರುತ್ತಿತ್ತು. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಈ ರೀತಿ ಪಥಸಂಚಲನ ನಡೆಸುವುದು ಎಷ್ಟು ಸರಿ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದರು.
ಆದರೆ ಆರ್ ಎಸ್ ಎಸ್ ಬೆಂಬಲಿತ ಕಾರ್ಯಕರ್ತರು ರಾಷ್ಟ್ರಭಕ್ತಿ ಹಾಗೂ ದೇಶಾಭಿಮಾನ ಮೂಡಿಸಲು ಪತಸಂಚಲವನ್ನು ನಡೆಸಿದರೆ ತಪ್ಪೇನು? ಎಂದು ಪ್ರಶ್ನೆ ಮಾಡುತ್ತಿದ್ದರು. ಇದನ್ನು ಮನಗಂಡು ರಾಜ್ಯ ಸರ್ಕಾರ ಸಂಘ ಪರಿವಾರ ಪ್ರೇರಿತ ಚಟುವಟಿಕೆಗಳಿಗೆ ಮೂಗುದಾರ ಹಾಕಲು ಮುಂದಾಗಿರುವುದು ವಿರೋಧ ಪಕ್ಷಗಳ ಕಣ್ಣು ಕೆಂಪಾಗುವಂತೆ ಮಾಡಿದೆ.
ಏನಿದು ತಮಿಳುನಾಡು ಮಾದರಿ?
ತಮಿಳುನಾಡಿನಲ್ಲಿ ಆರೆಸ್‍ಎಸ್ (ರಾಷ್ಟ್ರೀಯ ಸ್ವಯಂಸೇವಕ್ ಸಂಘ) ಚಟುವಟಿಕೆಗಳನ್ನು ಪೂರ್ಣವಾಗಿ ನಿರ್ಬಂಧಿಸಲಾಗಿಲ್ಲ. ಆದರೆ ಡಿಎಂಕೆ ನೇತೃತ್ವದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸರ್ಕಾರ ಆರ್ ಎಸ್ ಎಸ್ ನ ಕೆಲವು ಚಟುವಟಿಕೆಗಳಿಗೆ ಅನುಮತಿ ನೀಡುವುದನ್ನು ನಿರಾಕರಿಸುತ್ತಿದೆ. ವಿಶೇಷವಾಗಿ ಸರ್ಕಾರಿ ಆಸ್ತಿಗಳಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವ ರೂಟ್ ಮಾರ್ಚ್‍ಗಳು, ಶಾಖಾ ತರಬೇತಿ ಮತ್ತು ಗುರು ಪೂಜೆಗಳಂತಹ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲಾಗಿದೆ.
ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


