Tuesday, November 3, 2026
spot_img
More
    spot_img
    HomeLatest newsಬಿಹಾರ ಚುನಾವಣೆಗೆ ಸ್ಪರ್ಧಿಸಲ್ಲ, ಎನ್‌ಡಿಎ ಸೋಲು ಖಚಿತ

    ಬಿಹಾರ ಚುನಾವಣೆಗೆ ಸ್ಪರ್ಧಿಸಲ್ಲ, ಎನ್‌ಡಿಎ ಸೋಲು ಖಚಿತ

    ಬಿಹಾರ ವಿಧಾನಸಭಾ ಚುನಾವಣೆ 2025ರಲ್ಲಿ ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ತಂತ್ರಜ್ಞ ಮತ್ತು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಘೋಷಣೆ ಮಾಡಿದ್ದಾರೆ. ನವೆಂಬರ್ 6, 11ರಂದು ಮತದಾನ ನಡೆಯಲಿದ್ದು, ನವೆಂಬರ್ 14ಕ್ಕೆ ಫಲತಾಂಶ ಘೋಷಣೆಯಾಗಲಿದೆ.

    ಬಿಹಾರ ವಿಧಾನಸಭಾ ಚುನಾವಣೆ 2025ರಲ್ಲಿ ಪ್ರಶಾಂತ್ ಕಿಶೋರ್ ಸ್ಪರ್ಧೆ ಕುರಿತು ಹಬ್ಬಿದ್ದ ಸುದ್ದಿಗಳಿಗೆ ಬುಧವಾರದ ಘೋಷಣೆ ಮೂಲಕ ಅವರು ತೆರೆ ಎಳೆದರು. ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಅವರು ಬಿಹಾರ ಚುನಾವಣೆ ಕುರಿತು ಹಲವು ವಿವರಗಳನ್ನು ನೀಡಿದ್ದಾರೆ.

    “ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. 150ಕ್ಕಿಂತ ಕಡಿಮೆ ಸೀಟು ಬಂದರೆ ಅದನ್ನು ಜನ ಸುರಾಜ್ ಪಕ್ಷದ ಸೋಲು ಎಂದು ಪರಿಗಣಿಸಲಾಗುತ್ತದೆ. ಪಕ್ಷ ಗೆದ್ದರೆ ಅದು ದೇಶದಲ್ಲಿ ಚರ್ಚೆಗೆ ಕಾರಣವಾಗುತ್ತದೆ, ರಾಷ್ಟ್ರ ರಾಜಕೀಯ ದಿಕ್ಸೂಚಿ ಆಗಲಿದೆ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

    ಪ್ರಶಾಂತ್ ಕಿಶೋರ್ ರಾಘೋಪುರದಿಂದ ಆರ್‌ಜೆಡಿಯ ತೇಜಸ್ವಿ ಯಾದವ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಜನ ಸುರಾಜ್ ಪಕ್ಷ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. “ನಾನು ಚುನಾವಣೆಗೆ ಸ್ಪರ್ಧಿಸಬಾರದು ಎಂದು ಪಕ್ಷ ತೀರ್ಮಾನಿಸಿದೆ” ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ.

    “ನಮ್ಮ ಪಕ್ಷ ಸೋಲಬಹುದು ಅಥವ ಭರ್ಜರಿ ಜಯಗಳಿಸಬುದು. ಬಿಹಾರ ವಿಧಾನಸಭೆ ಚುನಾವಣೆ 2025ರಲ್ಲಿ ಜನ ಸುರಾಜ್ ಪಕ್ಷ 10ಕ್ಕಿಂತ ಕಡಿಮೆ ಸ್ಥಾನಗಳಿಸಲಿದೆ. ಇಲ್ಲವೇ 150ಕ್ಕಿಂತ ಅಧಿಕ ಸ್ಥಾನ ಪಡೆದು ಭರ್ಜರಿ ಜಯ ದಾಖಲು ಮಾಡಲಿದೆ” ಎಂದು ಪ್ರಶಾಂತ್ ಕಿಶೋರ್ ಸಂದರ್ಶನದಲ್ಲಿ ಮಾತನಾಡಿದ್ದಾರೆ.

    2024ರ ಅಕ್ಟೋಬರ್‌ನಲ್ಲಿ ಪ್ರಶಾಂತ್ ಕಿಶೋರ್ ಜನ ಸುರಾಜ್ ಎಂಬ ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ಬಿಹಾರದಲ್ಲಿ ಪಾದಯಾತ್ರೆ ಸೇರಿದಂತೆ ಹಲವು ಹೋರಾಟವನ್ನು ನಡೆಸಿದ್ದರು. ಅವರು ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು.

    ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ತಮಿಳುನಾಡಿನಲ್ಲಿ ಡಿಎಂಕೆ ಗೆಲುವಿಗೆ ತಂತ್ರ ರೂಪಿಸಿದ್ದ I-PAC ಸಂಸ್ಥಾಪಕ ಪ್ರಶಾಂತ್ ಕಿಶೋರ್ ಬಿಹಾರ ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಲಿದ್ದಾರೆ? ಎಂದು ಕಾದು ನೋಡಬೇಕಿದೆ.

    ಎನ್‌ಡಿಎಗೆ ಸೋಲು: “ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸೋಲು ಅನುಭವಿಸಲಿದೆ” ಎಂದು ಪ್ರಶಾಂತ್ ಕಿಶೋರ್ ವಿಶ್ಲೇಷಿಸಿದ್ದಾರೆ. ಹಾಲಿ ರಾಜ್ಯದ ಆಡಳಿತ ಪಕ್ಷವಾಗಿರುವ ಜೆಡಿಯು, ಬಿಜೆಪಿ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ನಿರೀಕ್ಷೆಯಲ್ಲಿದೆ.

    ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಈಗಾಗಲೇ ಅಂತಿಮವಾಗಿದೆ. ಬಿಜೆಪಿ 101, ಜೆಡಿಯು 101, ಜನಶಕ್ತಿ ಪಕ್ಷ (ರಾಮ್ ವಿಲಾಸ್) 29, ಎಚ್‌ಎಎಂ 6, ರಾಷ್ಟ್ರೀಯ ಲೋಕಮೋರ್ಚಾ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಬಿಜೆಪಿ 71 ಸೀಟುಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

    ಬಿಹಾರದಲ್ಲಿ ವಿರೋಧ ಪಕ್ಷಗಳ ಮಹಾಘಟಬಂಧನ್ ರಚನೆ ಮಾಡಿಕೊಂಡಿವೆ. ಮೈತ್ರಿಕೂಟದಲ್ಲಿ ಆರ್‌ಜೆಡಿ 135, ಕಾಂಗ್ರೆಸ್ 61, ಎಡಪಕ್ಷಗಳು 29-31, ಮುಕೇಶ್ ಸಾಹ್ನಿ ವಿಕಾಸಶೀಲ ಐಸಾನ್ ಪಕ್ಷ 16 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಎಎಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದು, ಮೈತ್ರಿಕೂಟ ಸೇರಿಲ್ಲ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search