Thursday, November 5, 2026
spot_img
More
    spot_img
    HomeLatest newsಆರ್‌ಎಸ್‌ಎಸ್‌ ಬೆದರಿಕೆ ಕರೆಯ ವಿಡಿಯೊ ಹಂಚಿಕೊಂಡ ಪ್ರಿಯಾಂಕ್ ಖರ್ಗೆ; ತಾಯಿ, ಸಹೋದರಿಗೆ ನಿಂದನೆ!

    ಆರ್‌ಎಸ್‌ಎಸ್‌ ಬೆದರಿಕೆ ಕರೆಯ ವಿಡಿಯೊ ಹಂಚಿಕೊಂಡ ಪ್ರಿಯಾಂಕ್ ಖರ್ಗೆ; ತಾಯಿ, ಸಹೋದರಿಗೆ ನಿಂದನೆ!

    ಶಾಲಾ – ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಿಯಾಂಕ್‌ ಖರ್ಗೆ ಬರೆದ ಪತ್ರ ಇದೀಗ ಭಾರೀ ಚರ್ಚೆಗೀಡಾಗಿದೆ.

    ಪ್ರಿಯಾಂಕ್‌ ಖರ್ಗೆ ಬರೆದ ಪತ್ರದ ವಿರುದ್ಧ ಬಿಜೆಪಿಗರು ಹಾಗೂ ಸಂಘ ಪರಿವಾರದವರು ತಿರುಗಿಬಿದ್ದಿದ್ದು, ಟೀಕಾ ಪ್ರಹಾರ ಮಾಡಿದ್ದಾರೆ.

    ಒಂದೆಡೆ ರಾಜಕೀಯ ನಾಯಕರು ಈ ನಡೆ ವಿರುದ್ಧ ಮೂಗು ಮುರಿದಿದ್ದರೆ, ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕ್‌ ಖರ್ಗೆಯನ್ನು ಟ್ರೋಲ್‌ ಮಾಡಲಾಗುತ್ತಿದೆ. ಅಲ್ಲದೇ ಸ್ವತಃ ಪ್ರಿಯಾಂಕ್‌ ಖರ್ಗೆ ಕಳೆದೆರಡು ದಿನಗಳಿಂದ ತನಗೆ ಸತತವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಹ ಹೇಳಿಕೊಂಡಿದ್ದಾರೆ.

    ಇದಕ್ಕೆ ಸಂಬಂಧಿಸಿದಂತೆ ಇದೀಗ ಪ್ರಿಯಾಂಕ್‌ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ತಮ್ಮ ಮೊಬೈಲ್‌ಗೆ ಬಂದ ಕಿಡಿಗೇಡಿಯ ಕರೆಯನ್ನು ರೆಕಾರ್ಡ್‌ ಮಾಡಿಕೊಂಡಿದ್ದಾರೆ. ಈ ಕರೆಯಲ್ಲಿ ಹಿಂದಿ ಮಾತನಾಡುವ ವ್ಯಕ್ತಿಯೊಬ್ಬ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುತ್ತೀಯಾ ಎಂದು ಪ್ರಿಯಾಂಕ್‌ ಖರ್ಗೆಗೆ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾನೆ. ಪ್ರಿಯಾಂಕ್‌ ಖರ್ಗೆ ತಾಯಿಗೂ ಸಹ ಅವಾಚ್ಯ ಶಬ್ದ ಬಳಸಿದ್ದು, ಇದರ ವಿರುದ್ಧವೂ ಪ್ರಿಯಾಂಕ್‌ ಖರ್ಗೆ ದನಿ ಎತ್ತಿದ್ದಾರೆ.

    ಆರ್‌ಎಸ್‌ಎಸ್‌ ಯುಕವರ ಮನಸ್ಸಿನಲ್ಲಿ ಕಲ್ಮಶ ತುಂಬುವ ಕೆಲಸವನ್ನು ಹೇಗೆ ಮಾಡುತ್ತದೆ ಹಾಗೂ ಆ ಕಲ್ಮಶ ಹೇಗಿರುತ್ತದೆ ಎಂಬುದಕ್ಕೆ ಇದು ಸಣ್ಣ ಉದಾಹರಣೆ ಎಂದಿದ್ದಾರೆ. ಅಲ್ಲದೇ ಕಳೆದೆರಡು ದಿನಗಳಿಂದ ಬರುತ್ತಿರುವ ಬೆದರಿಕೆ ಕರೆಗಳ ಪೈಕಿ ಇದೊಂದು ಸ್ಯಾಂಪಲ್‌ ಎಂದಿರುವ ಪ್ರಿಯಾಂಕ್‌ ಖರ್ಗೆ ತಾಯಿ, ಸಹೋದರಿ ಹೆಸರನ್ನು ಹಿಡಿದು ತುಚ್ಚವಾಗಿ ನಿಂದಿಸುವುದು ಆರ್‌ಎಸ್‌ಎಸ್‌ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ ಎಂದು ಪ್ರಶ್ನಿಸಿದ್ದಾರೆ.

    ಬಿಜೆಪಿ ನಾಯಕರ ಮಕ್ಕಳು ಭವಿಷ್ಯ ರೂಪಿಸಿಕೊಳ್ಳುತ್ತಿದ್ದು, ಬಡವರ ಮಕ್ಕಳನ್ನು ಈ ರೀತಿ ಬೆದರಿಸುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಉದ್ದನೆಯ ಟ್ವೀಟ್‌ ಮಾಡಿದ್ದಾರೆ.

    ನಾನು ಮಾತನಾಡಿದರೆ ವಿವಾದ ಸೃಷ್ಟಿಯಾಗುತ್ತೆ; ತಂಡಕ್ಕೆ ಆಯ್ಕೆ ಮಾಡದ ಬಿಸಿಸಿಐ ರಾಜಕೀಯ ಬಿಚ್ಚಿಟ್ಟ ಮೊಹಮ್ಮದ್‌ ಶಮಿ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search