Monday, July 6, 2026
spot_img
More
    spot_img
    HomeLatest newsಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸುಳಿವು ಕೊಟ್ಟ ಸಿದ್ದರಾಮಯ್ಯ

    ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸುಳಿವು ಕೊಟ್ಟ ಸಿದ್ದರಾಮಯ್ಯ

    ಹಾಸನ: ಆರ್‌ಎಸ್‌ಎಸ್‌ ಮಾತ್ರವಲ್ಲ, ಯಾವುದೇ ಸಂಘಟನೆಗಳಾದರೂ ಶಾಲೆಗಳ ಆವರಣ, ಪಾರ್ಕ್‍ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇರೆಯವರಿಗೆ ತೊಂದರೆ ಕೊಟ್ಟು ತಮ್ಮ ಚಟುವಟಿಕೆಗಳನ್ನು ಮಾಡಬಾರದು ಎಂದು ಸೂಚನೆ ನೀಡಿರುವುದಾಗಿ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಘಪರಿವಾರದ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸುಳಿವನ್ನು ನೀಡಿದ್ದಾರೆ.

    Advertisement

    ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿನಲ್ಲಿ ತೆಗೆದುಕೊಂಡಿರುವ ಕ್ರಮಗಳ ಮಾಹಿತಿ ಪಡೆದು ರಾಜ್ಯದಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.

    ಸಚಿವರೊಂದಿಗಿನ ಔತಣಕೂಟಕ್ಕೂ, ರಾಜಕೀಯಕ್ಕೂ ಸಂಬಂಧವಿಲ್ಲ. ಪದೇ ಪದೇ ನಾವು ಸೇರುವುದು, ಊಟ ಮಾಡುವುದು, ಚರ್ಚೆ ಮಾಡುವುದು ಸಾಮಾನ್ಯ. ಈ ಸಂದರ್ಭದಲ್ಲಿ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ಮಾಡುತ್ತೇವೆ. ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆಗೆ ಸಂಬಂಧ ಪಟ್ಟ ಚರ್ಚೆಯಾಗಿಲ್ಲ ಎಂದರು.

    ಹೈಕಮಾಂಡ್ ಸದ್ಯಕ್ಕೆ ಬಿಹಾರದ ವಿಧಾನಸಭೆ ಚುನಾವಣೆಯ ಕಾರ್ಯದೊತ್ತಡದಲ್ಲಿದೆ. ಆ ಕಡೆ ಹೆಚ್ಚು ಗಮನಕೇಂದ್ರಿ ಕರಿಸಿದೆ. ಅನಂತರ ಯಾವ ರೀತಿ ಸೂಚನೆ ನೀಡುತ್ತದೆಯೋ ಅದರಂತೆ ಮಾಡಲಾಗುತ್ತದೆ. ಸದ್ಯಕ್ಕೆ ಯಾವುದೇ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ಕೊಡುವ ಅಗತ್ಯವಾದರೂ ಏನಿದೆ ಎಂದು ಪ್ರಶ್ನಿಸಿದರು.

    ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಜೆಡಿಎಸ್‍ನ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯ ಯಾವ ತೀರ್ಮಾನ ಮಾಡುತ್ತದೆಯೋ ಕಾದು ನೋಡುತ್ತೇವೆ ಎಂದರು.

    ಬಿಜೆಪಿ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎಲ್ಲರಿಗೂ ಸಮರ್ಪಕವಾಗಿ ಅನುದಾನ ನೀಡಿದ್ದರೇ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಜನರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್‍ಗಳಲ್ಲಿ ಮೀಸಲಾತಿ ಸಂಬಂಧಪಟ್ಟ ವಿವಾದ ನ್ಯಾಯಾಲಯದಲ್ಲಿದೆ. ಕೋರ್ಟ್ ಯಾವಾಗ ಆದೇಶ ನೀಡುತ್ತದೆಯೋ ಆವಾಗ ಚುನಾವಣೆ ನಡೆಯುತ್ತದೆ. ಚುನಾವಣೆಗಳಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಹೀಗಾಗಿ ಬೆಂಗಳೂರಿನ ಪಾಲಿಕೆಗಳು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಹಂತಹಂತವಾಗಿ ನಡೆಸಲಾಗುವುದು ಎಂದರು.

    ಇದೇ ಸಂದರ್ಭದಲ್ಲಿ ಹಾಸನಾಂಬ ದೇವಿಯ ದರ್ಶನಕ್ಕಾಗಿ ಶಿಷ್ಟಾಚಾರಕ್ಕನುಗುಣವಾಗಿ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರು ಅಲ್ಲಿಂದ ಜಿಲ್ಲಾಡಳಿತ ಆಯೋಜಿಸಿರುವ ಬಸ್‍ನಲ್ಲಿ ದೇವಸ್ಥಾನಕ್ಕೆ ತೆರಳಿದರು. ಮುಖ್ಯಮಂತ್ರಿಯವರನ್ನು ಕಂಡು ಜನ ಶಿಳ್ಳೆ, ಚಪ್ಪಾಳೆಗಳ ಮೂಲಕ ಹರ್ಷ ವ್ಯಕ್ತಪಡಿಸಿದರು. ಜನರತ್ತ ಕೈ ಬೀಸುತ್ತಲೇ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

    ಎಸ್‌ಎಸ್‌ಎಲ್‌ಸಿ, ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್:‌ ಪಾಸಿಂಗ್‌ ಮಾರ್ಕ್ಸ್‌ನಲ್ಲಿ ಇಳಿಕೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading