ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಸದ್ಯ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ. ಬೆನ್ನು ನೋವಿನ ಕಾರಣ ನೀಡಿ ಚಿಕಿತ್ಸೆ ಪಡೆಯುವ ಸಲುವಾಗಿ ಮಧ್ಯಂತರ ಜಾಮೀನು ಪಡೆದಿದ್ದ ದರ್ಶನ್‌ಗೆ ಇದೀಗ ಸಂಕಷ್ಟ ಎದುರಾಗಿದೆ.
ಹೌದು, ಆಸ್ಪತ್ರೆಗೆ ದಾಖಲಾಗಿರುವ ದರ್ಶನ್ ಅವರಿಗೆ ಇದುವರೆಗೂ ಶಸ್ತ್ರ ಚಿಕಿತ್ಸೆ ನಡೆದಿಲ್ಲ. ಹೀಗಾಗಿ ಅವರು ಹೊರಗಿದ್ದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಮಧ್ಯಂತರ ಜಾಮೀನನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಇದಕ್ಕೆ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ.
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ತಯಾರಿಸುವ ಕಡತವನ್ನು ಪೊಲೀಸರು ಗೃಹ ಇಲಾಖೆಗೆ ನೀಡಿದ್ದಾರೆ. ಇನ್ನು ಯಾವುದೇ ಶಸ್ತ್ರ ಚಿಕಿತ್ಸೆಗೆ ಒಳಗಾಗದೇ ಇರುವ ದರ್ಶನ್ ಜಾಮೀನು ಅವಧಿ ಮುಗಿಯುವ ಕೊನೆಯ ಸಮಯದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದರೆ ವಿಶ್ರಾಂತಿಗೆಂದು ಮತ್ತಷ್ಟು ದಿನ ಜಾಮೀನು ವಿಸ್ತರಣೆಗೆ ಬೇಡಿಕೆ ಇಡುವ ಸಾಧ್ಯತೆಗಳಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


