ಹುಬ್ಬಳ್ಳಿ: ರಾಜ್ಯ ಸರ್ಕಾರ ಪಂಚ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಭಾರೀ ಚರ್ಚೆಯನ್ನುಟ್ಟುಹಾಕಿದೆ. ಅದರಲ್ಲಿಯೂ ಮಹಿಳೆಯರಿಗೆ ಉಚಿತ ಬಸ್ ಹಾಗೂ ತಿಂಗಳಿಗೆ 2000 ರೂಪಾಯಿ ನೀಡುತ್ತಿರುವುದು ಮೆಚ್ಚುಗೆ ಜತೆಗೆ ಟೀಕೆಗೂ ಒಳಗಾಗಿದೆ. ಹೀಗಿರುವಾಗಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಚಿತ ಬಸ್ ಕುರಿತಾಗಿ ನೀಡಿರುವ ಹೇಳಿಕೆ ಈ ಚರ್ಚೆಗಳನ್ನು ಮತ್ತಷ್ಟು ಹೆಚ್ಚಿಸಿದೆ.
ಹೌದು, ನಿನ್ನೆ ( ನವೆಂಬರ್ 14 ) ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮಹಿಳೆಯರಿಗೆ ಉಚಿತ ಬಸ್, ತಿಂಗಳಿಗೆ ಹಣ ನೀಡುತ್ತಿದ್ದೀರ, ಹೀಗಾಗಿ ನನ್ನ ತಾಯಿ ಹಾಗೂ ಅಕ್ಕಂದಿರು ಊರಿಗೆ ಹೋಗುತ್ತಾರೆ, ನನ್ನನ್ನು ಕರೆದುಕೊಂಡು ಹೋಗುವುದಿಲ್ಲ, ನಮಗೂ ಫ್ರೀ ಬಸ್ ಯೋಜನೆ ಮಾಡ್ತೀರಾ ಎಂಬ ಪ್ರಶ್ನೆಯನ್ನು ಹಾಕಿದ್ದ.
ಈ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ನೋಡೋಣ, ಇಷ್ಟು ವಯಸ್ಸಿನವರೆಗೆ ಉಚಿತ ಎಂದು ಏನಾದರೂ ಮಾಡೋಣ ಎಂದಿದ್ದರು. ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ನಿಜಾನಾ, ಪುರುಷರಿಗೂ ಉಚಿತ ಬಸ್ ಯೋಜನೆ ಜಾರಿಯಾಗುತ್ತಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪುರುಷರಿಗೆ ಉಚಿತ ಬಸ್ ಯೋಜನೆ ತರುವ ಯಾವುದೇ ಪ್ರಸ್ತಾವನೆ ಸರ್ಕಾರದ ಬಳಿ ಇಲ್ಲ ಎಂದು ಸ್ಪಷ್ಟನೆ ನೀಡಿ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


