Wednesday, November 11, 2026
spot_img
More
    spot_img
    HomeStateDistrictಬೆಳಗಾವಿ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಸಾವು, ತನಿಖೆಗೆ ಆದೇಶ

    ಬೆಳಗಾವಿ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಸಾವು, ತನಿಖೆಗೆ ಆದೇಶ

    ಬೆಳಗಾವಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವಿನ್ನಪ್ಪಿವೆ. ಎರಡು ದಿನದ ಅಂತರದಲ್ಲಿ ಇಷ್ಟು ಸಂಖ್ಯೆಯ ಕೃಷ್ಣಮೃಗಗಳ ಸಾವು ಪ್ರಕರಣ ಆತಂಕವನ್ನು ಮೂಡಿಸಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.

    ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಕೃಷ್ಣಮೃಗಗಳ ಸಾವು ಪ್ರಕರಣದ ಕುರಿತು ತಜ್ಞರ ಸಮಿತಿ ರಚಿಸಿ, ತನಿಖೆಯನ್ನು ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

    ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

    28 ಕೃಷ್ಣಮೃಗ ಸಾವು: ನವೆಂಬರ್ 13ರಂದು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಶನಿವಾರ 20 ಕೃಷ್ಣಮೃಗಗಳ ಸಾವನ್ನಪ್ಪಿವೆ.

    ಕೃಷ್ಣಮೃಗಗಳ ಸಾವು ಪ್ರಕರಣದ ಕುರಿತು ಅಧಿಕಾರಿಗಳು ಮಾತನಾಡಿ ಇದಕ್ಕೆ ಬ್ಯಾಕ್ಟೀರಿಯಾ ಸೋಂಕು ಕಾರಣ ಎಂದು ಹೇಳಿದ್ದಾರೆ. ಆದರೆ 8 ಕೃಷ್ಣಮೃಗಗಳು ಸಾವನ್ನಪ್ಪಿದ ಬಳಿಕ ಯಾವುದೇ ಕ್ರಮ ಕೈಗೊಳ್ಳದೇ ಅಧಿಕಾರಿಗಳು ಸುಮ್ಮನಾಗಿದ್ದರು. ಆದ್ದರಿಂದ ಇಂದು 20 ಕೃಷ್ಣಮೃಗಗಳ ಸಾವು ಸಂಭವಿಸಿದೆ.

    ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 38 ಕೃಷ್ಣಮೃಗಗಳು ಇದ್ದವು. ಇವುಗಳಲ್ಲಿ 28 ಸಾವನ್ನಪ್ಪಿವೆ. ಮೃಗಾಲಯದ ಎಸಿಫ್ ನಾಗರಾಜ್ ಬಾಳೆಹೊಸೂರು ಮಾತನಾಡಿ, ” ಮೃಗಗಳಲ್ಲಿ ಬ್ಯಾಕ್ಟೀರಿಯಾ ಇನ್ಫೆಕ್ಷನ್‌ನಿಂದ ಸಾವು ಸಂಭವಿಸಿರುವ ಅನುಮಾನವಿದೆ. ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ” ಎಂದು ಹೇಳಿದ್ದಾರೆ.

    “ಅನುಮಾನಾಸ್ಪದವಾಗಿ ಮೃತಪಟ್ಟ ಕೃಷ್ಣಮೃಗಗಳ ಶವಗಳನ್ನು ಪರಿಶೀಲನೆ ಮಾಡಿ, ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿನ ನಿಖರ ಕಾರಣ ಸ್ಪಷ್ಟವಾಗಲಿದೆ. ಬೆಂಗಳೂರಿನ ಬನ್ನೇರುಘಟ್ಟ ಪ್ರಾಣಿಶಾಸ್ತ್ರ ಉದ್ಯಾನವನದ ಅಧಿಕಾರಿಗಳಿಗೆ ಮಾದರಿಯನ್ನು ಕಳುಹಿಸಿದ್ದೇವೆ” ಎಂದು ತಿಳಿಸಿದ್ದಾರೆ.

    ಪ್ರಾಥಮಿಕ ವರದಿಯಂತೆ ಸಾಂಕ್ರಾಮಿಕ ಕಾಯಿಲೆಯಿಂದ ಈ ಕೃಷ್ಣ ಮೃಗಗಳು ಮೃತಪಟ್ಟಿವೆ ಎಂದು ಅಂದಾಜಿಸಲಾಗಿದೆ. ಮೃಗಾಲಯದ ಇತರ ಯಾವುದೇ ಪ್ರಾಣಿಗಳಿಗೆ ಸೋಂಕು ತಗುಲದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ಈ ಕೃಷ್ಣಮೃಗಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ? ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ? ಎಂಬ ಬಗ್ಗೆ ತಜ್ಞರ ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ.

    ಬೆಳಗಾವಿ ನಗರದಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಭೂತರಾಮನಟ್ಟಿ ಎಂಬಲ್ಲಿ ಮೃಗಾಲಯವಿದೆ. ಇದಕ್ಕೆ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯ ಎಂದು ನಾಮಕರಣ ಮಾಡಲಾಗಿದೆ. ಇದು ಒಂದು ಮಿನಿ ಮೃಗಾಲಯವಾಗಿದ್ದು, ಒಟ್ಟು 125 ಪ್ರಾಣಿಗಳಿವೆ.

    ಪ್ರತಿದಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯ ನೋಡಲು ಜನರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಆಗಮಿಸುತ್ತಾರೆ. ವಿಶೇಷ ಎಂದರೆ ದೇಶದಲ್ಲಿಯೇ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಿರುವ ಮೊದಲ ಕಿರು ಮೃಗಾಲಯ ಇದಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search