Tuesday, March 24, 2026
spot_img
More
    spot_img
    HomeLatest newsಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಡುವಲ್ಲಿ ಜೆಡಿಎಸ್ ವಿಫಲ

    ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಡುವಲ್ಲಿ ಜೆಡಿಎಸ್ ವಿಫಲ

    ಬೆಳಗಾವಿ: ಇಲ್ಲಿನ ಸುವರ್ಣ ವಿಕಾಸ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ದ ಸಂಘಟನಾತ್ಮಕವಾಗಿ ಹೋರಾಟ ನಡೆಸಲು ಜೆಡಿಎಸ್ ವಿಫಲವಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

    ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಆದರೆ, ಇದರ ಲಾಭವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಜೆಡಿಎಸ್ ವಿಫಲವಾಗುತ್ತಿರುವಂತೆ ತೋರುತ್ತಿದೆ.

    ಇದಕ್ಕೆ ಪ್ರಮುಖ ಕಾರಣ ಹೆಚ್‍ಡಿ ಕುಮಾರಸ್ವಾಮಿ ಅವರ ಅನುಪಸ್ಥಿತಿ. ಕುಮಾರಸ್ವಾಮಿ ಅವರು ದಾಖಲೆ ಸಹಿತವಾಗಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸುತ್ತಿದ್ದರು. ಇವರ ನಾಯಕತ್ವದಲ್ಲಿ ಸದನದಲ್ಲಿ ಜೆಡಿಎಸ್ ಕೂಡಾ ಸಕ್ರಿಯವಾಗಿ ಭಾಗಿಯಾಗುತ್ತಿತ್ತು. ಆದರೆ, ಇದೀಗ ಎಚ್‍ಡಿಕೆ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣ, ಜೆಡಿಎಸ್ ಪಕ್ಷಕ್ಕೆ ಅವರ ಅನುಪಸ್ಥಿತಿ ಕಾಡಲು ಶುರುವಾಗಿದೆ.

    ರಾಜ್ಯದಲ್ಲಿ ಪಕ್ಷ ಸಂಘಟನೆಗೂ ಗಮನ ಹರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದರೆ, ಸದನದಲ್ಲಿ ಜೆಡಿಎಸ್ ಪಕ್ಷ ವಿರೋಧ ಪಕ್ಷವಾಗಿ ಆಡಳಿತ ಪಕ್ಷದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಸಾಧ್ಯವಾಗುತ್ತಿಲ್ಲ.

    ಜೆಡಿಎಸ್ ಪರಿಸ್ಥಿತಿಯ ಬಗ್ಗೆ ಕೆಲವು ಶಾಸಕರಿಗೂ ಬೇಸರ ಇದೆ. ಆದರೆ ಅವರು ಬಹಿರಂಗವಾಗಿ ಇದನ್ನು ಹೇಳಿಕೊಳ್ಳುವ ಪರಿಸ್ಥಿತಿಯಲ್ಲಿ ಇಲ್ಲ.

    ಕುಮಾರಣ್ಣ ಸದನದಲ್ಲಿ ಕಾಣದೇ ಇರಬಹುದು ಆದರೆ, ಸಣ್ಣ ಸಣ್ಣ ಸಮಸ್ಯೆಗಳಿಗೂ ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆಂದು ಹೇಳಿದ್ದಾರೆ. ಇದೇ ವೇಳೆ ಸದನದಲ್ಲಿ ಅವರ ಉಪಸ್ಥಿತಿಯನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿಯೂ ತಿಳಿಸಿದ್ದಾರೆ.

    ಪಕ್ಷವಾಗಿ ನಾವು ಅವರ ಉಪಸ್ಥಿತಿ, ಮಾರ್ಗದರ್ಶನವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ, ಅವರಿಗೆ ಒಂದು ಸಚಿವಾಲಯದ ಕರ್ತವ್ಯವಿದೆ. ಹೀಗಾಗಿ, ನಾವು ಕರೆ ಮಾಡಿ ಅವರಿಂದ ಮಾರ್ಗದರ್ಶನ ನಡೆಯುತ್ತಿದ್ದೇವೆ. ಆದರೆ, ಅಧಿವೇಶನದಲ್ಲಿ ಅವರ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಕುಮಾರಣ್ಣಗೆ ಕುಮಾರಣ್ಣನೇ ಸಾಟಿ. ಪ್ರತೀ ನಿತ್ಯ ನಾವು ಅವರೊಂದಿಗೆ ಸಂಪರ್ಕದಲ್ಲಿರುತ್ತೇವೆಂದು ಜೆಡಿಎಸ್ ನ ಪ್ರಮುಖರೊಬ್ಬರು ಹೇಳಿದ್ದಾರೆ.

    ಶಾಸಕ ಶರಣಗೌಡ ಕಂದಕೂರ್ ಅವರು ಮಾತನಾಡಿ, ಉತ್ತರ ಕರ್ನಾಟಕದಿಂದ ನಮಗೆ ಹೆಚ್ಚಿನ ಸಂಖ್ಯಾಬಲವಿತ್ತು ಆದರೀಗ ನಮ್ಮ ಸಂಖ್ಯಾಬಲ ಕಡಿಮೆಯಾಗಿರುವುದು ನಿಜ, ಸರ್ಕಾರವು ನಮ್ಮ ಸಮಸ್ಯೆಗಳ ಬಗ್ಗೆ ಕಿವಿಕೊಡಬೇಕು., ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಶಾಸಕರ ಸಂಖ್ಯೆ ಕಡಿಮೆಯಾಗಿದ್ದು, ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ರೀತಿಯಲ್ಲಿ ಧ್ವನಿ ಎತ್ತಿದ್ದರೆ, ಇದು ಜೆಡಿಎಸ್ ಪಕ್ಷಕ್ಕೆ ಲಾಭವಾಗುತ್ತಿತ್ತು ಎಂದು ಹೇಳಿದ್ದಾರೆ.

    ಚಳಿಗಾಲದಲ್ಲಿಯೇ ‘ಪಾರ್ಶ್ವವಾಯು’ ಯಾಕೆ ಹೆಚ್ಚುತ್ತೆ? ತಡೆಯೋಕೆ ವೈದ್ಯರು ಹೇಳಿದ ಸೂಪರ್ ಟಿಪ್ಸ್!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading