ನವದೆಹಲಿ: ಆರು ದಶಕಗಳಿಗೂ ಅಧಿಕ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಅತೀವ ದುಃಖಿತನಾಗಿದ್ದೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿಕ್ಷಣತಜ್ಞರಾಗಿ ಹಲವು ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸಿ, ದಾವಣಗೆರೆಯನ್ನು ಜ್ಞಾನಕೇಂದ್ರವನ್ನಾಗಿ ರೂಪಿಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸಿದ್ದರು. ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಕುಟುಂಬಕ್ಕೆ ದಾರಿದೀಪವಾಗಿದ್ದರು. ಅವರ ಸರಳತೆ, ಸಾರ್ವಜನಿಕ ಸೇವೆಯಲ್ಲಿನ ನಿಷ್ಠೆ, ಎಲ್ಲಾ ಪಕ್ಷಗಳ ನಾಯಕರಿಂದಲೂ ಗೌರವಕ್ಕೆ ಪಾತ್ರರಾಗಿದ್ದರು. ಅವರ ಸೇವಾ ಪರಂಪರೆ ಸದಾಕಾಲ ಉಳಿಯುತ್ತದೆ. ಶಾಮನೂರು ಶಿವಶಂಕರಪ್ಪ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ, ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


